ವರದಿಗಾರ- ಮಂಗಳೂರು: ಇತ್ತೀಚೆಗೆ ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಕ್ರೀಡಾ ಪ್ರತಿಭೆ
ಕುಮಾರಿ ಕಾವ್ಯಾ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ತನಿಖೆಗೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ನಡೆಸಲು ಯತ್ನಿಸಿದವರನ್ನು ಬಂಧಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನ ಹಂಪನಕಟ್ಟೆ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಲು ಯತ್ನಿಸಿದವರಲ್ಲಿ ವಿದ್ಯಾರ್ಥಿನಿ ಕಾವ್ಯಾ ತಂದೆ ಲೋಕೇಶ್, ತಾಯಿ ಬೇಬಿ, ತಂಗಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ದಾಸ್ ಸೇರಿದಂತೆ ಅಂಗಿ ಬಿಚ್ಚಿದ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು ಇವರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
