ವರದಿಗಾರ-ಬನಾರಸ್: ಇಲ್ಲಿನ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಬಿಕ್ಕಟ್ಟನ್ನು ಸಮರ್ಪಕವಾಗಿ ನಿಭಾಯಿಸಿಲ್ಲ ಎಂದು ಸರಕಾರ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದಕ್ಕಾಗಿ ಹಿರಿಯ ಶಿಸ್ತುಪಾಲನಾ ಅಧಿಕಾರಿ, ಪ್ರೊಫೆಸರ್ ಒ.ಎನ್. ಸಿಂಗ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ಇಲ್ಲಿನ ವಿದ್ಯಾರ್ಥಿಗೆ ಚುಡಾಯಿಸಿದಕ್ಕೆ ಶನಿವಾರ ರಾತ್ರಿ ಕುಲಪತಿಗಳನ್ನು ಅವರ ನಿವಾಸದಲ್ಲಿ ಭೇಟಿಯಾಗಲು ವಿದ್ಯಾರ್ಥಿನಿಯರು ತೆರಳಿದ್ದರು. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಡೆದಿದ್ದರು. ಈ ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿನಿಯರು ನಡೆಸಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದಲ್ಲಿ ಮಹಿಳೆಯರು ಸೇರಿದಂತೆ ಹಲವು ವಿದ್ಯಾರ್ಥಿನಿಯರು, ಇಬ್ಬರು ಪತ್ರಕರ್ತರು ಈ ಸಂದರ್ಭ ಗಾಯಗೊಂಡಿದ್ದರು.
ಹಿಂಸಾಚಾರ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸರಕಾರ ಮಂಗಳವಾರ ಆದೇಶಿಸಿದೆ.
