ರಾಷ್ಟ್ರೀಯ ಸುದ್ದಿ

ಚುನಾವಣಾ ಭರವಸೆ: ರಾಹುಲ್ ಗಾಂಧಿ ಸರದಿ

ವರದಿಗಾರ-ಗುಜರಾತ್: ಎಲ್ಲಾ ಚುನಾವಣೆಗಳ ಸಂದರ್ಭಗಳಲ್ಲಿ ಜನರನ್ನು ತನ್ನತ್ತಾ ಸೆಳೆಯುವುದಕ್ಕಾಗಿ ಮತ್ತು ಮತಗಳ ಓಲೈಕೆಗಾಗಿ ರಾಜಕಾರಣಿಗಳು ಕಂಡು ಕೊಂಡಿರುವುದಾಗಿದೆ ಭರವಸೆ.. ಭರವಸೆ..

ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಈ ಭರವಸೆ ಮೊದಲಿಗಿಂತಲೂ ಹೆಚ್ಚಾಗಿ ಕಂಡು ಬರುವ ಎಲ್ಲಾ ಸಾಧ್ಯತೆಗಳಿವೆ.  ಚುನಾವಣೆ ಸಮೀಪಿಸುತ್ತಿರುವಾಗ ನೆನಪಾಗುವ ಭರವಸೆ, ಚುನಾವಣೆ ಬಳಿಕ ನೆನಪಾಗುವುದೇ ಇಲ್ಲ ಮತ್ತು ಜಾರಿಗೆಯಾಗದೇ ಇರುವುದು ಮಾತ್ರ ವಿಪರ್ಯಾಸ.

ಇನ್ನು ಮೂರು ದಿನಗಳ ಗುಜರಾತ್ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಬೆಳಿಗ್ಗೆ ಜಿಲ್ಲೆಯ ಚಾಮುಂಡಾ ಮಾತಾಜಿ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾ, ಸುರೇಂದರ್‌ನಗರ ಜಿಲ್ಲೆಯ ಚಿಬರಿ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು, ಸ್ಥಳೀಯರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ,, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ದಿನಬಳಕೆ ವಸ್ತುಗಳ ಬೆಲೆ ಏರಿಕೆ, 500,1000 ನೋಟು ನಿಷೇಧದ ಪರಿಣಾಮ, ನಿರುದ್ಯೋಗ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ‘ಗುಜರಾತ್ ಮಾದರಿ’ ಬಗ್ಗೆ ಲೇವಡಿ ಮಾಡಿದ್ದಾರೆ.

ರೈತರ ಕೃಷಿ ಸಾಲ ಮನ್ನಾ ಮಾಡುವಂತೆ ಉತ್ತರ ಪ್ರದೇಶ ಸರಕಾರವನ್ನು ಒತ್ತಾಯಿಸಿದ್ದೇವೆ. ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್‌ ಸರಕಾರಗಳು ಕೃಷಿ ಸಾಲ ಮನ್ನಾ ಮಾಡಿವೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಿದೆ ಎಂದು ಹೇಳಿದ್ದಾರೆ.

ಸಂವಾದದ ವೇಳೆ ಮಹಿಳೆಯೊಬ್ಬರು, ತಮ್ಮ ಮಗ ತೆರಳುವ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿಲ್ಲ ಎಂದು ರಾಹುಲ್ ಬಳಿ ಅಳಲು ತೋಡಿಕೊಂಡರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group