ವರದಿಗಾರ-ಮೈಸೂರು: ಮುಂಬರುವ ಅವಧಿಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಅವರು ಮೈಸೂರು ದಸರಾ ಉತ್ಸವದ ಅಂಗವಾಗಿ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಮುಂದಿನ ದಸರಾ ಉತ್ಸವ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯದ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನವೆಂಬರ್ 2ರಿಂದ ರಾಜ್ಯದಾದ್ಯಂತ 2 ತಿಂಗಳು ಪರಿವರ್ತನಾ ಯಾತ್ರೆ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.
