ರಾಜ್ಯ ಸುದ್ದಿ

ಬೆಂಕಿ ಹಚ್ಚುವ ಕೆಲಸ ಆರೆಸ್ಸೆಸ್ ನದ್ದು-ಮುಖ್ಯಮಂತ್ರಿ ಸಿದ್ದರಾಮಯ್ಯ

ವರದಿಗಾರ-ಚಿತ್ರದುರ್ಗಾ: ಬೆಂಕಿ ಹಚ್ಚುವ ಕೆಲಸವು ಆರೆಸ್ಸೆಸ್ ನದ್ದು, ಬೆಂಕಿ ಹಚ್ಚುವುದು ಅವರಿಗೆ ರಕ್ತಗತವಾಗಿ ಬಂದಿದೆ. ನಮ್ಮದು ಸಾಮರಸ್ಯ ಮೂಡಿಸುವ ಕೆಲಸವೆಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಚಿತ್ರದುರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನಿಂದ ಏನು ಕೆಲಸ ಆಗ್ತಿಲ್ಲ. ನಮ್ಮದ್ದು ‘ಕಾಮ್ ಕೀ ಬಾತ್’. ಇದು ಕೇಂದ್ರದಿಂದ ನಕಲಿ ಮಾಡಿದ್ದಲ್ಲ. ಸಕಾಲದಲ್ಲಿ ಜನರಿಗೆ ಸಹಕರಿಸಲು ತಂದ ಯೋಜನೆ ಎಂದು ಇದೇ ಸಂದರ್ಭದಲ್ಲಿ  ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಬಾರಿಯೂ ನಾವೇ ದಸರಾ ವನ್ನು ಉದ್ಘಾಟಿಸುತ್ತೇವೆ. ನನ್ನ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ. ಬಳಿಕ ಶಾಸಕಾಂಗ ಮೂಲಕ ಮುಖ್ಯಮಂತ್ರಿ ಆಯ್ಕೆಯಾಗಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಈ ಬಗ್ಗೆ ಮಾಧ್ಯಮಗಳು ವಿನಾಕಾರಣ ವಿವಾದ ಸೃಷ್ಟಿಸುತ್ತಿವೆ ಎಂದಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group