ರಾಜ್ಯ ಸುದ್ದಿ

ಗೌರಿ ಹತ್ಯೆಯನ್ನು ಭಯೋತ್ಪಾದನಾ ಕೃತ್ಯವೆಂದು ಘೋಷಿಸಲು ಆಗ್ರಹ

ವರದಿಗಾರ-ಬೆಂಗಳೂರು: ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಭಯೋತ್ಪಾದನಾ ಕೃತ್ಯವೆಂದು ಘೋಷಿಸುವಂತೆ ನಗರದಲ್ಲಿ ಸೋಮವಾರ ನಡೆದ  ಪತ್ರಿಕಾಗೋಷ್ಠಿಯಲ್ಲಿ ಗೌರಿ ಲಂಕೇಶ್ ಹತ್ಯಾ ವಿರೋಧಿ ವೇದಿಕೆ ಆಗ್ರಹಿಸಿದೆ.

ಪ್ರಸ್ತುತ ನಡೆಯುತ್ತಿರುವ ತನಿಖೆಯು ತೃಪ್ತಿಕರವಾಗಿಲ್ಲ. ಹತ್ಯೆ ಪ್ರಕರಣದ ಎಸ್‌ಐಟಿ ತನಿಖೆಯನ್ನು ತೀವ್ರಗೊಳಿಸಬೇಕು ಮತ್ತು  ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ ವೇದಿಕೆಯು  ಕೊಲೆಗೆ ಪ್ರೇರಣೆ ನೀಡಿದವರನ್ನೂ ಗುರುತಿಸಬೇಕೆಂದು ಒತ್ತಾಯಿಸಿದೆ.

ಅ. 5ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ವಿಚಾರವಾದಿಗಳು ಮತ್ತು ಚಿಂತಕರು ಭಾಗವಹಿಸಲಿದ್ದಾರೆ ಎಂದು ಲೇಖಕಿ, ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ತಿಳಿಸಿದ್ದಾರೆ.

ಗೃಹ ಸಚಿವ ಎಂ.ರಾಮಲಿಂಗಾರೆಡ್ಡಿ ಅವರು ಗೌರಿ ಹತ್ಯೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ ಎಂದು ಹೇಳಿಕೆಯನ್ನು ನೀಡುತ್ತಿದ್ದು, ಹೇಳಿಕೆಯನ್ನು ಬಿಟ್ಟು ಆರೋಪಿಗಳ ಬಗ್ಗೆ ಬಹಿರಂಗಗೊಳಿಸಲಿ ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಕೆ.ನೀಲಾ ರವರ ಮಾತುಗಳು:

ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ನೀಲಾ ರವರ ಮಾತುಗಳು

Posted by Varadigara on Monday, 2 October 2017

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group