ಸಾಮಾಜಿಕ ತಾಣ

ಪ್ರಕಾಶ್ ರೈ ಹೇಳಿದ್ದೇ ಬೇರೆ, ವರದಿ ಬಂದದ್ದೇ ಬೇರೆ: ತಿರುಚಿದ ಸುದ್ದಿಗೆ ನಟ ಆಕ್ರೋಶ

ವರದಿಗಾರ-ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಆರೋಪಿಗಳ ಬಂಧನವಾಗದಿರುವುದು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರಿ ಹತ್ಯೆಯ ಬಗ್ಗೆ ಹೇಳಿಕೆ ನೀಡದಿರುವುದನ್ನು ಖಂಡಿಸಿ ನೀಡಿದ ಹೇಳಿಕೆಯನ್ನು ತಿರುಚಿ ಸುದ್ದಿ ಪ್ರಕಟಿಸಿರುವ ಸುದ್ದಿ ವಾಹಿನಿಗಳ ವಿರುದ್ಧ ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೌರಿ ಹತ್ಯೆ ಸಂಬಂಧ ಪ್ರಧಾನಿ ಮೋದಿ ಅವರ ನಡೆಯನ್ನು ಖಂಡಿಸಿ ಪ್ರಕಾಶ್ ರೈ ಅವರು ತಮ್ಮ 5 ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ ಎಂದು ಕೆಲವು ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ವರದಿ ಪ್ರಕಟಿಸಿದ್ದವು.

ತಿರುಚಿದ ಸುದ್ದಿಯು  ಸಾಮಾಜಿಕ ಜಾಲತಾಣದಲ್ಲಿ  ವೈರಲಾಗಿ ಸಾಕಷ್ಟು ಚರ್ಚೆಗಳು ನಡೆದಿದೆ. ಈ ಬಗ್ಗೆ ಸುದ್ದಿ ತಿಳಿದ ಪ್ರಕಾಶ್ ರೈ ಸತ್ಯಾಂಶವನ್ನು ಟ್ವಿಟ್ಟರ್ ನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

“ನ್ಯೂಸ್ ಚಾನಲ್ ಗಳಲ್ಲಿನ ಸ್ಕ್ರಾಲ್ ಗಳನ್ನು ನೋಡುತ್ತಿದ್ದರೆ ನನಗೆ ನಗು ಬರುತ್ತದೆ. ಪ್ರಶಸ್ತಿ ಪಡೆಯಲು ಎಷ್ಟು ಕಷ್ಟ ಪಟ್ಟಿದ್ದೇನೆ. ಅಂತಹದರಲ್ಲಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತೇನೆ ಎಂದು ಹೇಳಿಲ್ಲ. ಆದರೂ ಸುದ್ದಿ ವಾಹಿನಿಗಳು ಇಂತಹ ವರದಿ ಮಾಡಿದ್ದಾರೆ” ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಗೌರಿ ಲಂಕೇಶ್, ಕಲಬುರಗಿ ಅವರತಂಹ ಹತ್ಯೆಗಳಾದಾಗ ಮಾತನಾಡುವುದು ನನ್ನ ಹಕ್ಕು. ನಾನೂ ಈ ದೇಶದ ಒಬ್ಬ ನಾಗರಿಕ. ನನಗೂ ಪ್ರಶ್ನಿಸುವ ಹಕ್ಕಿದೆ. ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿರುವುದಕ್ಕೆ ನನಗೆ ಹೆಮ್ಮೆ ಇದೆ. ನಾನು ಹೇಳಿದ್ದು ಗೌರಿ ಕೊಂದವರು ಯಾರೆಂದು ಗೊತ್ತಿಲ್ಲ. ಆದರೆ ಗೌರಿ ಹತ್ಯೆಯನ್ನು ಸಂಭ್ರಮಿಸಿದವರನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದ್ದೇನೆ ಹೊರತು ಪ್ರಶಸ್ತಿ ಹಿಂದಿರುಗಿಸುತ್ತೇನೆ ಎಂದು ಹೇಳಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಈ ದೇಶದ ಪ್ರಜೆಯಾಗಿ ಮೋದಿಯನ್ನು ಪ್ರಶ್ನಿಸುವ ಹಕ್ಕು ನನಗೂ ಇದೆ ಎಂದು ಹೇಳಿದರೆ ಸುದ್ದಿ ವಾಹಿನಿಗಳು ನನ್ನ ಹೇಳಿಕೆಯನ್ನೇ ತಿರುಚಿ ರಾಷ್ಟ್ರ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಾಕಿದ್ದಾರೆ ಎಂದು ಪ್ರಕಾಶ್ ರೈ ಸ್ಪಷ್ಟ ಪಡಿಸಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group