ವರದಿಗಾರ ಡೆಸ್ಕ್ : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಿಂದೂ ಅಲ್ಲ ಎಂದು ಹೇಳುವ ಮೂಲಕ ಸಚಿವ ವಿನಯ್ ಕುಲಕರ್ಣಿ ವಿವಾದವೊಂದಕ್ಕೆ ಮುನ್ನುಡಿ ಹಾಕಿದ್ದಾರೆ.
ಸ್ವತಂತ್ರ ಧರ್ಮ ವಿಚಾರವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಟಿವಿ ಸುದ್ದಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿನಯ್ ಕುಲಕರ್ಣಿ ಲಿಂಗಾಯತ ಸ್ವತಂತ್ರ ಧರ್ಮವಾದ್ರೆ ಹಿಂದುತ್ವ ಒಡೆಯುತ್ತದೆ ಎಂದು ಹೇಳುವ ಬಿಜೆಯವರ ನಡೆ ಸರಿಯಲ್ಲ ಎಂದು ಟೀಕಿಸಿದರು.
ಅಲ್ಪ ಸಂಖ್ಯಾತ ಸಮುದಾಯದಿಂದ ಬಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿಶಾ ಅವರು ಮೊದಲು ರಾಜೀನಾಮೆ ನೀಡಲಿ. ಅಮಿತ್ ಶಾ ಅವರು ಹಿಂದೂ ಅಲ್ಲ. ಅಲ್ಪಸಂಖ್ಯಾತ ಮಾನ್ಯತೆ ಪಡೆದ ಅಮಿತ್ ಷಾ ಹಿಂದುತ್ವದ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ಧರ್ಮದ ವಿಚಾರದಲ್ಲಿ ಆರ್ಎಸ್ಎಸ್ ತಲೆ ಹಾಕುವುದನ್ನು ನಿಲ್ಲಿಸಲಿ. ಸಿಎಂ ಸಿದ್ದರಾಮಯ್ಯನವರು ಸಿದ್ದರಾಮನ ಹುಂಡಿಯಲ್ಲಿ ಹುಟ್ಟಿ ಬೆಳೆದಿದ್ದಾರೆ, ಬಸವವಾದಿ ಶರಣ ತತ್ವ ಹೊಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು.
