ರಾಜ್ಯ ಸುದ್ದಿ

ಸಿದ್ಧರಾಮಯ್ಯರ ಆರ್ಥಿಕ ನೀತಿಯನ್ನು ಮನಸಾರೆ ಹೊಗಳಿದ ಮನಮೋಹನ್ ಸಿಂಗ್

ವರದಿಗಾರ : ಸಿದ್ದರಾಮಯ್ಯರದ್ದು ಜನಪರವಾದ ಆಡಳಿತವಾಗಿದ್ದು, ಅವರಿಗೆ ಆರ್ಥಿಕತೆಯ ಬಗ್ಗೆ ಹೆಚ್ಚಿನ ಅರಿವಿದ್ದು, ಇದುವರೆಗೂ ಮಂಡಿಸಿದ ಬಜೆಟ್‌ಗಳೆಲ್ಲವೂ ಯಶಸ್ವಿಯಾಗಿರುವುದಾಗಿರುವುದೇ ಅವರ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞರೂ ಆಗಿರುವ ಮನಮೋಹನ್ ಸಿಂಗ್, ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯರ ಬಗ್ಗೆ  ಹಾಡಿ ಹೊಗಳಿದ್ದಾರೆ.  ಸಿದ್ಧರಾಮಯ್ಯರವರು 12 ಬಜೆಟ್’ಗಳನ್ನು ಮಂಡನೆ ಮಾಡಿದ ಕೀರ್ತಿಯಿರುವಂತಹವರು. ಪ್ರತಿ ಬಜೆಟ್’ನಲ್ಲೂ ತನ್ನ ಶಿಸ್ತನ್ನು ಕಾಪಾಡಿಕೊಂಡು ಆರ್ಥಿಕ ಸಮತೋಲನವನ್ನು ಕಾಯ್ದುಕೊಂಡು ಬಂದಿದ್ದಾರೆ ಎಂದು ಮನಮೋಹನ್ ಈ ವೇಳೆ ಹೇಳಿದರು. ಅವರು ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಇಕಾನಮಿಕ್ಸನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಫುಡ್ ಸೆಕ್ಯುರಿಟಿ ಬಿಲ್ ಜಾರಿ ಮಾಡಿದ್ದೆವು. ಕರ್ನಾಟಕ ಅದನ್ನು ಹೆಚ್ಚು ಪರಿಣಾಮಕಾರಿಯಾಗಿ ಯೋಜನೆ ಜಾರಿ ಮಾಡಿದೆ. ರಾಜ್ಯದಲ್ಲಿ ಜನಪರ ಸರ್ಕಾರವನ್ನು ನಡೆಸುತ್ತಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಿದ್ಧಾಂತಕ್ಕೆ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅನ್ನಭಾಗ್ಯದಂತಹ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, 1.16 ಕೋಟಿ ಜನರ ಅನ್ನದಾಹ ನೀಗಿಸಿದ್ದಾರೆ. ಇನ್ನು ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ರೈತರ 72  ಸಾವಿರ ಕೋಟಿ ಸಾಲ ಮನ್ನಾ ಮಾಡಿತ್ತು. ಅದೇ ರೀತಿ ಕರ್ನಾಟಕ ಸರ್ಕಾರವೂ 8 ಸಾವಿರ ರೈತರ ಸಾಲ ಮನ್ನಾ ಮಾಡಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡಿರುವುದು ಸಂತಸದ ವಿಷಯ ಎಂದಿದ್ದಾರೆ. ಕರ್ನಾಟಕ ಅಭಿವೃದ್ಧಿ ಪಥದ ನಾಗಾಲೋಟದಲ್ಲಿದೆ ಎಂದವರು ಇದೇ ವೇಳೆ ಹೇಳಿದರು.

ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಶೈಕ್ಷಣಿಕ ವ್ಯವಸ್ಥೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇವಲ ಕರ್ನಾಟಕವೊಂದರಲ್ಲೇ 13000 ಕ್ಕೂ ಅಧಿಕ ಮಂದಿ ವಿದೇಶಿ ವಿದ್ಯಾರ್ಥಿಗಳು  ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ತೋರಿಸುತ್ತಿರುವ ಕಾಳಜಿ, ವಿದ್ಯಾಭ್ಯಾಸದ ಮಟ್ಟ ಎಲ್ಲವೂ ಉತ್ತಮವಾಗಿದ್ದು, ಸ್ಕೂಲ್‌ ಆಫ್ ಎಕನಾಮಿಕ್ಸ್’ನ ವಿದ್ಯಾರ್ಥಿಗಳು ಮುಂದೆ ಉತ್ತಮ ಆರ್ಥಿಕ ತಜ್ಞರಾಗಿ ರೂಪುಗೊಳ್ಳಲಿ ಎಂದು ಮನಮೋಹನ್ ಸಿಂಗ್ ಹಾರೈಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group