ವರದಿಗಾರ ಡೆಸ್ಕ್: ಇತ್ತೀಚೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಪ್ರಚಾರ ಸಭೆಯಲ್ಲಿ ಮಾತನಾಡಿ ಲಿಂಗಾಯತ ಸಮುದಾಯ ಮತ್ತು ಸ್ವಾಮೀಜಿಗಳನ್ನು ಗುರಿಯಾಗಿಸಿ ‘ಶನಿ ಸಂತಾನರು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹುಬ್ಬಳ್ಳಿಯ ಆರೆಸ್ಸೆಸ್ ಪ್ರಚಾರಕ ಸು.ರಾಮಣ್ಣ ಕ್ಷಮೆ ಯಾಚಿಸಿದ್ದಾರೆ.
ವಿವಾದಾತ್ಮಕ ಹೇಳಿಕೆ ವಿರುದ್ಧ ಲಿಂಗಾಯತ ಸಮುದಾಯ ಮತ್ತು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಹಿರಂಗ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದರು.
ಹೇಳಿಕೆಯ ಕುರಿತು ರಾಮಣ್ಣ ಪ್ರತಿಕ್ರಿಯಿಸುತ್ತಾ, ಯಾವುದೇ ವ್ಯಕ್ತಿ ಮತ್ತು ಸಮಾಜವನ್ನು ನೋಯಿಸುವ ಉದ್ದೇಶ ನನ್ನದಲ್ಲ. ಹಿಂದೂ ಸಮಾಜದ ಎಲ್ಲಾ ಜಾತಿ, ಮತ, ಪಂಥ ಮತ್ತು ಸಂಪ್ರದಾಯಗಳ ಬಗ್ಗೆ ಸಮಾನ ಗೌರವವನ್ನು ನಾನು ಹೊಂದಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಅದಕ್ಕಾಗಿ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ.
