ರಾಜ್ಯ ಸುದ್ದಿ

ಸಿದ್ದರಾಮಯ್ಯ ರಾಜಕೀಯ ಹಂತಕ-ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಪ್ರಸಾದ್‌

ವರದಿಗಾರ- ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಹಂತಕ. ಅಧಿಕಾರಕ್ಕಾಗಿ ಯಾರನ್ನು ಬೇಕಾದರೂ ಮುಗಿಸಲು ಸುಪಾರಿ ಕೊಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಅವರನ್ನು ಸೋಲಿಸುವುದೇ ನನ್ನ ಗುರಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ. ಶ್ರೀನಿವಾಸ್ ಪ್ರಸಾದ್‌ ಹೇಳಿದ್ದಾರೆ.

ಅವರು ನಿನ್ನೆ ಮೈಸೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಂಜನಗೂಡು ಉಪಚುನಾವಣೆಯಲ್ಲಿ 44 ಸಾವಿರ ಮತ ಪಡೆಯಲು 44 ಕೋಟಿ ಖರ್ಚು ಮಾಡಿದ್ದಾರೆ. ಅದಕ್ಕೆ ಅವರ ‘ಮನೆಯ ಕೆಲಸಗಾರ’ ಎಚ್‌.ಸಿ.ಮಹದೇವಪ್ಪ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಸೇರಿಕೊಂಡು ಜೆಡಿಎಸ್ ಸಹಾಯದಿಂದ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದರು. ಈಗ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ನಾಟಕವಾಡುತ್ತಿದ್ದಾರೆ. ವರುಣಾ, ಚಾಮುಂಡೇಶ್ವರಿ ಎರಡು ಕಣ್ಣುಗಳು ಇದ್ದಂತೆ ಎನ್ನುತ್ತಿದ್ದಾರೆ. ಮೂರನೇ ಕಣ್ಣು ಎಲ್ಲಿ ಬಿಡುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group