ರಾಜ್ಯ ಸುದ್ದಿ

ಕನ್ನಡ ಹೋರಾಟಗಾರ ಮೇಲಿನ ಕ್ರಿಮಿನಲ್ ಕೇಸ್ ವಾಪಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ವರದಿಗಾರ: ಕನ್ನಡ ನಾಡು-ನುಡಿಗೆ ಹೋರಾಟ ಮಾಡಿದವರ ಮೇಲೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ಅವರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಕನ್ನಡಿಗರ ಸಮಾವೇಶ ಜಾನಪದ ಸಂಭ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
 
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಮನೆಯಲ್ಲಿ ಯಾವುದೇ ಮಾತೃಭಾಷೆ ಇರಲಿ. ಕನ್ನಡ ನಾಡಿನಲ್ಲಿ ಇದ್ದ ಮೇಲೆ ಅವರು ಕನ್ನಡಿಗರು. ತಮಿಳುನಾಡಿನಲ್ಲಿ ತಮಿಳು, ಕೇರಳದಲ್ಲಿ ಮಲೆಯಾಳಂ, ಆಂಧ್ರದಲ್ಲಿ ತೆಲುಗಿಗೆ ಸಿಕ್ಕಿರುವ ಪ್ರಾಧ್ಯಾನ್ಯತೆ ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕು. ಕನ್ನಡಿಗರಲ್ಲಿ ಭಾಷಾಭಿಮಾನ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುತ್ತಿರುವ ನಾರಾಯಣಗೌಡ ಮತ್ತು ಅವರ ತಂಡದ ಶ್ರಮವನ್ನು ಶ್ಲಾಘಿಸುತ್ತೇನೆ ಎಂದರು.
 
ಕನ್ನಡ ಸಂಘಟನೆಗಳ ಹೋರಾಟದ ಕಷ್ಟ ನನಗೆ ಗೊತ್ತಿದೆ. ಪೊಲೀಸರಿಂದ ಪೆಟ್ಟು ತಿನ್ನಬೇಕು. ಕ್ರಿಮಿನಲ್ ಕೇಸುಗಳನ್ನು ಹಾಕಿಸಿಕೊಳ್ಳಬೇಕು. ಜೈಲಿಗೆ ಹೋಗಬೇಕು ಈ ಎಲ್ಲಾ ಸಂಕಷ್ಟಗಳ ನಡುವೆ ಕನ್ನಡಕ್ಕಾಗಿ ಹೋರಾಟ ಮಾಡಬೇಕು. ಕುವೆಂಪು ಅವರು ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪ ವೃಕ್ಷವಾಗುತ್ತದೆ ಎಂದು ಹೇಳಿದ್ದಾರೆ. ಅದೇ ರೀತಿ ಕನ್ನಡ ನಾಡನ್ನು ಸರ್ವಜ್ಞರು ಶಾಂತಿತೋಟ ಎಂದು ಬಣ್ಣಿಸಿದ್ದಾರೆ. ಕನ್ನಡ ಎಂದರೆ ಕುವೆಂಪು ಮತ್ತು ರಾಜ್‍ಕುಮಾರ್ ನೆನಪಾಗುತ್ತಾರೆ ಎಂದು ಈ ಸಂದರ್ಭ ಮುಖ್ಯಮಂತ್ರಿ ಸ್ಮರಿಸಿದ್ದಾರೆ.
 
'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group