ವರದಿಗಾರ: ಹಾಲು ನೀಡದ, ಕರುವನ್ನೂ ಹಾಕದ ಗೊಡ್ಡೆಮ್ಮೆಯಂತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ ಜೋಶಿ ಅವರಿಂದ ಜಿಲ್ಲೆಗೆ ಏನೂ ಪ್ರಯೋಜನವಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಟೀಕಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಿಂಚಣಿ ಹಣಕ್ಕಾಗಿ ಪ್ರತಿಭಟನೆ ಮಾಡುವ ಮೂಲಕ ಇಬ್ಬರೂ ಹೊಸ ನಾಟಕ ಪ್ರಾರಂಭಿಸಿದ್ದಾರೆ. ಚುನಾವಣೆ ಹತ್ತಿರ ಬಂದಂತೆ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು’ ಎಂದಿದ್ದಾರೆ
ಪಿಂಚಣಿ ಹಣಕ್ಕಾಗಿ ಪ್ರತಿಭಟನೆ ಮಾಡುವ ಬದಲು ಮುಖ್ಯಮಂತ್ರಿಯವರ ಬಳಿಯೇ ನೇರವಾಗಿ ಅವರು ಮಾತನಾಡಬಹುದಿತ್ತು. ಅದು ಬಿಟ್ಟು ನನ್ನ ಮನೆ ಮುಂದೆ ಪ್ರತಿಭಟನೆ ಮಾಡುವುದು ಸರಿಯಲ್ಲ. ಪಿಂಚಣಿ ಹಣಕ್ಕಾಗಿ ಪ್ರತಿಭಟಿಸುವ ಇವರು, ಮಹದಾಯಿ ಯೋಜನೆ ಜಾರಿಗೆ ತರಲು ಒತ್ತಾಯಿಸಿ ಏಕೆ ಧರಣಿ ನಡೆಸುವುದಿಲ್ಲ ಎಂದು ಅವರು ಪ್ರಶ್ನಿಸಿದರು.
