ವರದಿಗಾರ: ದೇಶವು 71ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿರುವ ಸಮಯದಲ್ಲಿ, ಸಾಮಾಜಿಕ ಜಾಲತಾಣವಾದ ವಾಟ್ಸಪ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಅತ್ಯಂತ ಕೆಟ್ಟ ಶಬ್ದಗಳಿಂದ ಹಿಯಾಳಿಸುತ್ತಿರುವ ವಾಟ್ಸಪ್ ಚಾಟ್ ಇದೀಗ ಸಾಮಾಜಿಕ ತಾಣದಾದ್ಯಂತ ಹರಿದಾಡುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಸ್ವಾತಂತ್ರ್ಯ ದಿನದಂದೇ ಇಷ್ಟು ಕೀಳಾಗಿ ಚಿತ್ರಿಸಿ ಆನಂದಿಸುತ್ತಿರುವುದು ಸೈದ್ಧಾಂತಿಕ ದ್ವೇಷ ಹಾಗೂ ಮತೀಯ ಅಮಲಿನಲ್ಲಿ ಅವನತಿಯತ್ತ ಸಾಗುತ್ತಿರುವ ಯುವ ಪೀಳಿಗೆಯ ಚಿತ್ರಣವಾಗಿದೆ.
ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕ್ರಮ ತೆಗೆದುಕೊಳ್ಳುತ್ತದಾ? ಇನ್ನಷ್ಟೇ ಕಾದು ನೋಡಬೇಕಾಗಿದೆ.
(ಸಾರ್ವಜನಿಕ ಹಿತಾಸಕ್ತಿಗಾಗಿ ದೂರವಾಣಿ ಸಂಖ್ಯೆ ಮತ್ತು ಹೆಸರು ಬಹಿರಂಗಪಡಿಸಿಲ್ಲ)
