ರಾಷ್ಟ್ರೀಯ ಸುದ್ದಿ

ಮೇಘಾಲಯದಲ್ಲಿ ಗೋಮಾಂಸ ನಿಷೇಧ ಇಲ್ಲ : ಬಿಜೆಪಿ ಸ್ಪಷ್ಟನೆ

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಮೇಘಾಲಯದಲ್ಲಿ ಗೋಮಾಂಸ ನಿಷೇಧ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ರಾಜಕೀಯ ಲಾಭಕ್ಕಾಗಿ ಚುನಾವಣೆಯನ್ನು ಎದುರು ನೋಡುತ್ತಿರುವ ರಾಜ್ಯದ ಜನರ ಮಧ್ಯೆ ಕಾಂಗ್ರೆಸ್ ಈ ಬಗ್ಗೆ ಆತಂಕ ಸೃಷ್ಟಿಸುತ್ತಿದೆ ಎಂದೂ ಬಿಜೆಪಿ ಆರೋಪಿಸಿದೆ.

ಮೇಘಾಲಯ ರಾಜ್ಯದ ಬಿಜೆಪಿ ಅಧ್ಯಕ್ಷ ಶಿಬಿನ್ ಲಿಂಗ್ದೋ ಈ ಬಗ್ಗೆ ಮಾತನಾಡುತ್ತಾ, ಕೇಂದ್ರ ಸರಕಾರವು ಮೇಘಾಲಯದಲ್ಲಿ ಗೋಮಾಂಸವನ್ನು ನಿಷೇಧಿಸಿಲ್ಲ, ಮೇ 23ರ ಪ್ರಕಟಣೆಯು ಕೇವಲ ಮಾರುಕಟ್ಟೆಯಲ್ಲಿ ಪ್ರಾಣಿಗಳ ನಿರ್ವಹಣೆ ಮತ್ತು ವ್ಯವಹಾರಕ್ಕೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ವಕ್ತಾರ ಜೇ ಲಿಂಗ್ದೋ ತನ್ನ ಹೇಳಿಕೆಯಲ್ಲಿ, ಈಶಾನ್ಯ ರಾಜ್ಯಗಳಲ್ಲಿ ಗೋಮಾಂಸ ನಿಷೇಧ ಜಾರಿಗೆ ತರಲಾಗುವುದಿಲ್ಲ ಎಂದು ಪಕ್ಷವು ಸ್ಪಷ್ಟಪಡಿಸಿದೆ ಹಾಗೂ ಇದು ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಾಗಿರುವುದರಿಂದ ರಾಜ್ಯ ಸರಕಾರಗಳು ತೀರ್ಮಾನಿಸಬೇಕಾಗಿದೆ ಎಂದು ಹೇಳಿದ್ದಾರೆ. ಗೋಮಾಂಸ ನಿಷೇಧವು ಉತ್ತಮ ಆರ್ಥಿಕ ಉಪಕ್ರಮವಲ್ಲ ಅದೇ ರೀತಿ ಸಾಂವಿಧಾನಿಕವೂ ಅಲ್ಲ ಎಂದು ಅವರು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group