ರಾಷ್ಟ್ರೀಯ ಸುದ್ದಿ

ಬಿಜೆಪಿ ಸರಕಾರ ಯುಪಿಎ ಸರಕಾರಕ್ಕಿಂತ ಭಿನ್ನವಿಲ್ಲ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಆರೆಸ್ಸೆಸ್ ಅಂಗಸಂಸ್ಥೆ ಆತಂಕ

ವರದಿಗಾರ: ಮೋದಿ ನೇತೃತ್ವದ ಬಿಜೆಪಿ ಸರಕಾರವು ಈ ಮೊದಲು ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ನೀತಿಯನ್ನೇ ಮುಂದುವರಿಸುತ್ತಿದ್ದು, ಇದರಿಂದ ದೇಶದಲ್ಲಿ ನಿರುದ್ಯೋಗ ಸೃಷ್ಠಿಯಾಗಿದೆ ಮತ್ತು ಆರ್ಥಿಕತೆ ಕುಸಿಯುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ದ ಅಂಗಸಂಸ್ಥೆ ಭಾರತೀಯ ಮಜ್ದೂರ್ ಸಂಘ (BMS) ಆತಂಕ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರದ ಆರ್ಥಿಕ ನೀತಿ ವಿರುದ್ಧ ಆತಂಕ ವ್ಯಕ್ತಪಡಿಸಿ ಧ್ವನಿ ಎತ್ತಿರುವ ಆರೆಸ್ಸೆಸ್ ನ ಅಂಗಸಂಸ್ಥೆ ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಸಾಜಿ ನಾರಾಯನ್, ಕೇಂದ್ರ ಸರಕಾರದ ಆರ್ಥಿಕ ನೀತಿಯಿಂದ ದೇಶದಲ್ಲಿ ಉದ್ಯೋಗ ಸೃಷ್ಠಿಯಾಗುತ್ತಿಲ್ಲ ಮತ್ತು ದೇಶಿ ಉತ್ಪಾದನೆಗೆ ಉತ್ತೇಜನವೂ ಸಿಗುತ್ತಿಲ್ಲ ಎಂದಿದ್ದಾರೆ.

ಸರಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ನವೆಂಬರ್ 17ರಂದು ಸಂಸತ್ತಿಗೆ ರಾಲಿ ಯನ್ನು ಆಯೋಜಿಸಲಾಗಿದೆ ಎಂದಿದ್ದಾರೆ.

ಯುಪಿಎ ಸರಕಾರ ಕಸದ ಬುಟ್ಟಿಗೆ ಎಸೆದಿದ್ದ ನಿರ್ದಿಷ್ಟ ಸುಧಾರಣೆಗಳನ್ನು ಮೋದಿ ನೇತೃತ್ವದ ಎನ್ ಡಿಎ ಸರಕಾರ ಹೆಕ್ಕಿಕೊಂಡು ತನ್ನದೇ ಸುಧಾರಣೆ ಎಂದು ಬಿಂಬಿಸುತ್ತಿದೆ ಮತ್ತು ಅವರದೇ ಸುಧಾರಣೆಯನ್ನು ಮುಂದುವರಿಸುತ್ತಾ ಬರುತ್ತಿದೆ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group