ವರದಿಗಾರ: ಭಾರತದ ಅರ್ಥವ್ಯವಸ್ಥೆಯ ಮೂಲಭೂತ ಅಂಶಗಳು ಬಲಿಷ್ಠವಾಗಿವೆ. ಅದು ಸರಿಯಾದ ದಿಕ್ಕಿನಲ್ಲೇ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ GST ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ನೋಟು ರದ್ದತಿಗೆ ಮತ್ತು GST ಜಾರಿಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದರೂ ತಾನು ಎದೆಗುಂದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.
ಅವರು ದಕ್ಷಿಣ ಗುಜರಾತ್ನ ದಹೇಜ್ ಮತ್ತು ಭಾವನಗರದ ಘೋಘಾ ನಡುವಣ ರೊ–ರೊ ಸಮುದ್ರಯಾನ ಸೇವೆಗೆ ಚಾಲನೆ ನೀಡಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ದೇಶದ ಅರ್ಥ ವ್ಯವಸ್ಥೆಯನ್ನು ಪ್ರಗತಿಯ ಹಾದಿಗೆ ಮರಳಿಸಲು ಸರಕಾರ ಕೈಗೊಂಡಿರುವ ಉತ್ತೇಜನಾ ಕ್ರಮಗಳು ಇನ್ನೂ ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ. ಅರ್ಥ ವ್ಯವಸ್ಥೆಯ ಸುಧಾರಣೆಗಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಹೇಳಿಕೊಂಡಿದ್ದಾರೆ.
