ರಾಜ್ಯ ಸುದ್ದಿ

ಲೀಲಾವತಿ ಅತ್ಯಾಚಾರ, ಕೊಲೆ ಪ್ರಕರಣ: ಸಯನೈಡ್ ಕಿಲ್ಲರ್ ಮೋಹನ್‌ ಗಲ್ಲು ಶಿಕ್ಷೆ ರದ್ದು

ವರದಿಗಾರ: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರಿನ ಲೀಲಾವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಸಯನೈಡ್‌ ಕಿಲ್ಲರ್ ಮೋಹನ್‌ ಕುಮಾರ್‌ಗೆ ಮಂಗಳೂರು ಸೆಷನ್ಸ್‌ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಈ ಕುರಿತಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕಾಯಂಗೊಳಿಸುವಂತೆ ಕೋರಿ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಜಾನ್ ಮೈಕೆಲ್‌ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ತಿರಸ್ಕರಿಸಿದೆ.

‘ಅಪರಾಧಿಯ ವಿರುದ್ಧದ ಅತ್ಯಾಚಾರ, ಅಪಹರಣ, ವಂಚನೆ ಮತ್ತು ಕೊಲೆ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ. ಮೃತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ದರೋಡೆ ಮಾಡಿರುವುದು ಮಾತ್ರವೇ ದೃಢಪಟ್ಟಿದೆ. ಈ ಆರೋಪಕ್ಕೆ ಐದು ವರ್ಷ ಜೈಲು ಶಿಕ್ಷೆ ಹಾಗೂ  5 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ರಾಜ್ಯದ ವಿವಿಧ ಸ್ಥಳಗಳಲ್ಲಿ ಸಯನೈಡ್‌ ಕಿಲ್ಲರ್ ಮೋಹನಕುಮಾರ್ 20 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಬಳಿಕ  ಸಯನೈಡ್ ನೀಡಿ ಕೊಲೆ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾನೆ. ಮೋಹನ ಕುಮಾರ್ ವಿರುದ್ಧ ಇನ್ನೂ ಒಂದು ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಈ ಕುರಿತ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group