ವರದಿಗಾರ : ವಿಪಕ್ಷ ಕಾಂಗ್ರೆಸ್ ಸೇರಿದಂತೆ ಎಲ್ಲರ ಟೀಕೆಗೆ ಗುರಿಯಾಗಿದ್ದ ಚುನಾವಣಾ ಆಯೋಗ ಕೊನೆಗೂ ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಡಿಸಂಬರ್ 9 ಮತ್ತು 14 ರಂದು ಚುನಾವಣೆ ನಡೆಯಲಿದ್ದು, 18ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
2018 ರ ಜನವರಿ 23 ಕ್ಕೆ ಹಾಲಿ ವಿಧಾನಸಭೆಯ ಅವಧಿ ಮುಗಿಯುತ್ತದೆ.
ಹಿಮಾಚಲ ಪ್ರದೇಶದ ವಿಧಾನಸಭೆಯ ಚುನಾವಣಾ ದಿನಾಂಕ ಘೋಷಿಸಿದ ನಂತರವೂ ಗುಜರಾತ್ ಚುನಾವಣಾ ದಿನಾಂಕವನ್ನು ಪ್ರಕಟಿಸದೆ ಇದ್ದ ಆಯೋಗದ ನಿರ್ಧಾರವನ್ನು ಬಿಜೆಪಿ ಹೊರತುಪಡಿಸಿ ಉಳಿದೆಲ್ಲಾ ಪಕ್ಷಗಳು ಪ್ರಶ್ನಿಸಿದ್ದವು. ಹಿಮಾಚಲ ಪ್ರದೇಶದಲ್ಲಿ ನವಂಬರ್ 9ಕ್ಕೆ ಚುನಾವಣೆ ನಿಗದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾ ಆಯುಕ್ತ ಎ ಕೆ ಜೋಟಿ, ಹವಾಮಾನ ಪರಿಸ್ಥಿತಿ, ನೆರೆ ಪರಿಸ್ಥಿತಿ ಮತ್ತು ಹಬ್ಬಗಳು ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡಾಗಿದೆ ನಾವು ದಿನಾಂಕವನ್ನು ಅಂತಿಮಗೊಳಿಸಿದ್ದು ಎಂದವರು ತಿಳಿಸಿದ್ದಾರೆ.
