ರಾಷ್ಟ್ರೀಯ ಸುದ್ದಿ

ನೋಟು ನಿಷೇಧ ದಿನವನ್ನು ಕರಾಳ ದಿನವನ್ನಾಗಿ ಆಚರಿಸಲು ವಿರೋಧ ಪಕ್ಷಗಳ ತೀರ್ಮಾನ

ವರದಿಗಾರ: 2016ರ ನವೆಂಬರ್ 8ರಂದು 1000 ಹಾಗೂ 500 ರೂ. ಮುಖ ಬೆಲೆಯ ನೋಟುಗಳನ್ನು ನಿಷೇಧಗೊಳಿಸಿರುವುದು ದೇಶದಲ್ಲಿ ಉಂಟಾಗಿರುವ ಆರ್ಥಿಕ ಸಮಸ್ಯೆಗೆ ಮುಖ್ಯ ಕಾರಣವಾಗಿದ್ದು,  ಬರುವ ನವೆಂಬರ್ 8ಕ್ಕೆ ನೋಟು ನಿಷೇಧಕ್ಕೆ ಒಂದು ವರ್ಷ ಆಗಲಿರುವುದರಿಂದ ಆ ದಿನವನ್ನು ‘ಕರಾಳ ದಿನ’ ಎಂದು ಆಚರಿಸುವುದಾಗಿ ವಿರೋಧ ಪಕ್ಷಗಳು ಹೇಳಿವೆ.

ವಿರೋಧ ಪಕ್ಷಗಳ ಸಮನ್ವಯ ಸಮಿತಿಯ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರು, ‘ನೊಟು ರದ್ದತಿಯು ಎನ್‌ಡಿಎ ಸರಕಾರದ ಅಸಮರ್ಪಕ ಗ್ರಹಿಕೆಯ ಮತ್ತು ಆತುರದ ನಿರ್ಧಾರ’ ಎಂದು ಟೀಕಿಸಿದ್ದಾರೆ.

ಈ ಕರಾಳ ದಿನ ಆಚರಣೆಯಲ್ಲಿ ನೋಟು ನಿಷೇಧದಿಂದ ಆರ್ಥಿಕತೆಯ ಮೇಲೆ ಉಂಟಾದ ದುಷ್ಪರಿಣಾಮಗಳನ್ನು ಎತ್ತಿ ತೋರಿಸುವ ಸಲುವಾಗಿ ದೇಶದಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಿವೆ.

‘ಇದು ಒಂದು ಹಗರಣ ಎಂದೇ ಹೇಳಬಹುದು. ಹದಿನೆಂಟು ವಿರೋಧ ಪಕ್ಷಗಳು ತಮ್ಮ ಶಕ್ತಿಗನುಗುಣವಾಗಿ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ’ ಎಂದು ಅವರು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group