ಜಿಲ್ಲಾ ಸುದ್ದಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಟಿಪ್ಪುಸುಲ್ತಾನ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಸ್ ಡಿಪಿಐ ಉಪ್ಪಿನಂಗಡಿ ಖಂಡನೆ

ಉಪ್ಪಿನಂಗಡಿ: ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ಧರಾಮಯ್ಯ ಮತ್ತು ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮನಾದ ಟಿಪ್ಪುಸುಲ್ತಾನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಚಿತ್ರವನ್ನು ಹಂಚಿ ಸಮಾಜದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಲು ಯತ್ನಿಸಿದ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ವಲಯ ತೀವ್ರವಾಗಿ ಖಂಡಿಸುತ್ತದೆ. ಕೃತ್ಯವನ್ನು ಎಸಗಿದ ಆರೋಪಿ ಉಪ್ಪಿನಂಗಡಿ ನೆಕ್ಕಿಲಾಡಿಯ ಕಾರು ಕ್ಲಬ್ ಮಾಲಕ ಸದಾ ಯಾನೆ ಸದಾನಂದ ವಿರುದ್ಧ ಪೊಲೀಸರು ಕೇಸು ದಾಖಲಿಸಿ ಕ್ರಮ ತೆಗೆದುಕೊಳ್ಳುವಂತೆ ಎಸ್ ಡಿಪಿಐ ಒತ್ತಾಯಿಸುತ್ತದೆ.

ಸಿದ್ದರಾಮಯ್ಯ ಅವರು ಕೇವಲ ಒಂದು ಪಕ್ಷದ ಪ್ರತಿನಿಧಿಯಾಗಿರದೆ ಸಂವಿಧಾನಬದ್ದವಾಗಿ ಆಯ್ಕೆಯಾಗಿರುವ ರಾಜ್ಯದ ಪ್ರಥಮ ಪ್ರಜೆಯಾಗಿರುತ್ತಾರೆ. ಮುಖ್ಯಮಂತ್ರಿ ಸ್ಥಾನವು ಘನತೆ ಮತ್ತು ಗೌರವದಿಂದ ಕೂಡಿದ್ದಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಟೀಕೆ, ವಿಮರ್ಶೆಗಳಿಗೆ ಅವಕಾಶವಿದ್ದರೂ ಯಾವುದೇ ಮಾನಹಾನಿಕರ, ಅವಹೇಳನಕಾರಿ ಕೃತ್ಯಗಳು ಅಪರಾಧವಾಗಿರುತ್ತದೆ. ಅದೇ ರೀತಿ ದೇಶದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಯ ಟಿಪ್ಪುಸುಲ್ತಾನರನ್ನು ಅವಮಾನಕಾರಿಯಾಗಿ ಚಿತ್ರಿಸಿರುವ ಕೃತ್ಯವು ದೇಶದ್ರೋಹವಾಗಿರುತ್ತದೆ.

ಸರಕಾರದ ಆಡಳಿತ ವ್ಯವಸ್ಥೆಯ ಭಾಗವಾಗಿರುವ ಪೊಲೀಸ್ ಇಲಾಖೆಯು ಇಂತಹ ಸಮಾಜಘಾತಕ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಎಸ್ ಡಿಪಿಐ ಆಗ್ರಹಿಸುತ್ತದೆ ಎಂದು ವಲಯಾಧ್ಯಕ್ಷರಾದ ಝಕರಿಯಾ ಕೊಡಿಪ್ಪಾಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಫೇಸ್ಬುಕ್ಕಿನಲ್ಲಿ ಶೇರ್ ಮಾಡಿರುವ ಅವಹೇಳನಕಾರಿ ಪೋಸ್ಟ್

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group