ರಾಜ್ಯ ಸುದ್ದಿ

ಪರಿವರ್ತನಾ ರ‍್ಯಾಲಿಯನ್ನು ಪಶ್ಚಾತಾಪ ರ‍್ಯಾಲಿ ಎಂದು ಬದಲಾಯಿಸಿಕೊಳ್ಳಲಿ: ಗೃಹ ಸಚಿವರಿಂದ ಬಿಜೆಪಿಗೆ ಸಲಹೆ

ವರದಿಗಾರ: ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯು ಇಂದಿನಿಂದ ಹಮ್ಮಿಕೊಂಡಿರುವ ಪರಿವರ್ತನಾ ರ‍್ಯಾಲಿಯನ್ನು ಪಶ್ಚಾತಾಪ ರ‍್ಯಾಲಿ ಎಂದು ಹೆಸರು ಬದಲಾವಣೆ ಮಾಡಿಕೊಳ್ಳುವುದು ಸೂಕ್ತವೆಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿಗೆ ಸಲಹೆ ನೀಡಿದ್ದಾರೆ.

ಅವರು ಬೆಂಗಳೂರಿನಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸುವ ಮೊದಲು ಪತ್ರಕರ್ತರೊಂದಿಗೆ ಮಾತನಾಡುತ್ತಾ ಬಿಜೆಪಿಗೆ ಸಲಹೆ ನೀಡಿದ್ದಾರೆ.

ಹಮ್ಮಿಕೊಂಡಿರುವ ಪರಿವರ್ತನಾ ರ‍್ಯಾಲಿಯನ್ನು ಪಶ್ಚಾತ್ತಾಪ ರ‍್ಯಾಲಿ ಗೆ ಬದಲಾಯಿಕೊಂಡು ಜನರ ಬಳಿಗೆ ಹೋಗಿ ಕ್ಷಮೆ ಕೇಳಿದರೆ ಒಳ್ಳೆಯದು ಎಂದಿದ್ದಾರೆ.

2008ರಲ್ಲಿ ಬಿಜೆಪಿಗೆ ಜನರು ಅಧಿಕಾರ ನೀಡಿದರು. ಆದರೆ ಸರಿಯಾದ ಆಡಳಿತವನ್ನು ನೀಡಲಿಲ್ಲ. ಅದಲ್ಲದೆ ಮೂವರು ಮುಖ್ಯಮಂತ್ರಿಗಳು ಬದಲಾವಾಣೆಯಾದರು. ಸಾಲು ಸಾಲಾಗಿ ಜೈಲಿಗೆ ಹೋಗಿ ಬಂದರು. ಅವರು ಮಾಡಿದ ಹಗರಣಗಳನ್ನು ನನ್ನ ಬಾಯಿಂದ ಹೇಳಲು ಮನಸ್ಸು ಬರುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆಯೂ ಹೇಳುವಂತಿಲ್ಲ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿತ್ತು. ಇತ್ತೀಚೆಗೆ ಗುಜರಾತ್ ರಾಜ್ಯ ಸಭೆಯಲ್ಲಿ ಅಲ್ಲಿನ ಕಾಂಗ್ರೆಸ್  ಶಾಸಕರನ್ನು ಬೆಂಗಳೂರಿಗೆ ಕರೆತಂದಾಗ ಬಿಜೆಪಿಯವರು ಬೊಬ್ಬೆ ಹಾಕಿದರು. ಇವರ ಆಡಳಿತದಲ್ಲಿ ಅದೆಷ್ಟು ಬಾರಿ ರೆಸಾರ್ಟ್ ಯಾತ್ರೆ ಮಾಡಿದ್ದಾರೆ ಎಂಬುದನ್ನು ನೆನಪಿಸಿಕೊಳ್ಳಲಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಜನ ಕೊಟ್ಟ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡವರು ಈಗ ಪಶ್ಚಾತ್ತಾಪ ರ‍್ಯಾಲಿ ಮಾಡಬೇಕಿದೆ. ಇವರು ಮಾಡಿದ ತಪ್ಪುಗಳಿಗೆ ಕ್ಷಮೆಯೇ ಇಲ್ಲವಾದರೂ ಕನಿಷ್ಠ ಜನರ ಮುಂದೆ ಹೋಗಿ ಕ್ಷಮೆ ಕೇಳಿಕೊಳ್ಳಲಿ ಎಂದೂ ಸಲಹೆ ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group