ರಾಷ್ಟ್ರೀಯ ಸುದ್ದಿ

ಕೇಂದ್ರ ಸರಕಾರದ ನೀತಿಗಳಿಂದಾಗಿ ಯುವ ಜನತೆ, ರೈತರು ಮತ್ತು ವ್ಯಾಪಾರಿಗಳು ಅತೃಪ್ತರಾಗಿದ್ದಾರೆ: ಮತ್ತೊಮ್ಮೆ ಕೇಂದ್ರದ ವಿರುದ್ಧ ಚಾಟಿ ಬೀಸಿದ ಬಿಜೆಪಿ ನಾಯಕ 

 

ವರದಿಗಾರ: ಕೇಂದ್ರ ಸರಕಾರದ ನೀತಿಗಳಿಂದಾಗಿ ಯುವ ಜನತೆ, ರೈತರು ಮತ್ತು ವ್ಯಾಪಾರಿಗಳು ಅತೃಪ್ತರಾಗಿದ್ದಾರೆ ಎಂದು ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಮತ್ತೊಮ್ಮೆ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಲ್ಲಿರುವ  ಏಕ ವ್ಯಕ್ತಿ ಪ್ರದರ್ಶನ ಮತ್ತು ಇಬ್ಬರಷ್ಟೇ ಇರುವ ಸೇನೆ ಎಂಬ ಸ್ಥಿತಿ ಬದಲಾದರೆ ಮಾತ್ರ ಜನರ ಆಶೋತ್ತರಗಳಿಗೆ ಬಿಜೆಪಿ ಸ್ಪಂದಿಸಲು ಸಾಧ್ಯವೆಂದು ಅವರು ಹೇಳಿದ್ದಾರೆ.

ಮಾತು ಮುಂದುವರಿಸಿದ ಸಿನ್ಹಾ, ಪಕ್ಷವನ್ನು ಬಿಟ್ಟು ಹೋಗುವ ಉದ್ದೇಶದಿಂದ ನಾನು ಬಿಜೆಪಿಗೆ ಸೇರಿಲ್ಲ. ಆದರೆ ಹೇಳಬೇಕಾದ್ದನ್ನು ಹೇಳುವಾಗ ನಮ್ಮ ವಿರುದ್ಧನೇ ತಿರುಗಿ ಬೀಳುತ್ತಿದ್ದಾರೆ.

ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ನಾವು ಭಾರಿ ದೊಡ್ಡ ಸವಾಲು ಎದುರಿಸುತ್ತಿರುವಂತೆ ಕಾಣಿಸುತ್ತಿದೆ. ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿರುವ ವಾಸ್ತವವನ್ನು ನಾವು ಅರ್ಥ ಮಾಡಿಕೊಳ್ಳಬೇಕು ಮತ್ತು ಪ್ರತಿಸ್ಪರ್ಧಿಗಳನ್ನು ಲಘುವಾಗಿ ಕಾಣಬಾರದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಟೇಲ್‌ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿ ಬಿಜೆಪಿ ನಾಯಕತ್ವವು ದುರಹಂಕಾರದಿಂದ ವರ್ತಿಸಿದೆ. ಸೈದ್ಧಾಂತಿಕವಾಗಿ ಬಿಜೆಪಿಗೆ ಹತ್ತಿರ ಇರುವ ಹಾರ್ದಿಕ್‌ ಪಟೇಲ್‌ ರನ್ನು ಒಲಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ಅವರು ಖೇದ ವ್ಯಕ್ತಪಡಿಸಿದ್ದಾರೆ.

 

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group