ಸುತ್ತ-ಮುತ್ತ

ಪುತ್ತೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಸ್ಥಾಪನಾ ದಿನಾಚರಣೆ

ಪುತ್ತೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಯಶಸ್ವಿ 8 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಕೂರ್ನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು, ಸಮಾಜದಲ್ಲಿ ಆಗುವಂತಹ ಅನ್ಯಾಯಗಳನ್ನು ಪ್ರಶ್ನಿಸಲು, ಹೋರಾಟವನ್ನು ರೂಪಿಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉದಯವಾಯಿತು. ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ,ರಾಜಕೀಯವಾಗಿ ಸಬಲೀಕರಣಗೊಳಿಸಲು ಇಂದು ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ಒದಗಿಸಿಕೊಡುತ್ತದೆ ಎಂದು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂದೇಶ ಭಾಷಣ ಮಾಡಿದ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಸಾಧಿಕ್ ಜಾರತ್ತಾರು ಹೇಳಿದರು. ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಅಧ್ಯಕ್ಷರಾದ ಸವಾದ್ ಕಲ್ಲರ್ಪೆಯವರ ಅಧ್ಯಕ್ಷತೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ನಾಗೇಶ್ ಕುರಿಯ ಹಾಗೂ ದಲಿತ ಹೋರಾಟಗಾರ ದಿವಂಗತ ಕೂಸಪ್ಪರವರ ಮಗ ಹರ್ಷಿತ್ ಕುಮಾರ್ ಹಾಗೂ ಪ್ರಮುಖರಾದ ನಾಸಿರ್ ಕಲ್ಲರ್ಪೆ, ಮಸೂದ್ ಕೂರ್ನಡ್ಕ, ಫಾಝಿಲ್ ಪುರುಷರಕಟ್ಟೆ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ತಾಲೂಕು ಸಮಿತಿ ಸದಸ್ಯರಾದ ಶಿಯಾಬ್ ಬೀಟಿಗೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ತಾಲೂಕಿನಲ್ಲಿ ಅಂಕತ್ತಡ್ಕ, ಕುಂಬ್ರ, ಸವಣೂರಿನಲ್ಲೂ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ವರದಿ : ಸವಾದ್ ಕಲ್ಲರ್ಪೆ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group