ರಾಜ್ಯ ಸುದ್ದಿ

ವೈದ್ಯರ ಯಾವುದೇ ಸಮಸ್ಯೆಗಳನ್ನು ಆಲಿಸುವುದಿಲ್ಲ. ಕೂಡಲೇ ಪ್ರತಿಭಟನೆಯನ್ನು ಕೈ ಬಿಟ್ಟು ಕರ್ತವ್ಯದಲ್ಲಿ ನಿರತರಾಗಿ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್

ವರದಿಗಾರ: ಮುಷ್ಕರ ನಿರತ ವೈದ್ಯರ ಯಾವುದೇ ಸಮಸ್ಯೆಗಳನ್ನು ಆಲಿಸುವುದಿಲ್ಲ. ಕೂಡಲೇ ಪ್ರತಿಭಟನೆಯನ್ನು ಕೈ ಬಿಟ್ಟು ಕರ್ತವ್ಯದಲ್ಲಿ ನಿರತರಾಗಿ. ಇಲ್ಲದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಖಡಕ್ ನಿರ್ದೇಶನ ನೀಡಿದೆ.

ಕಳೆದ ನಾಲ್ಕು ದಿನಗಳಿಂದ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದರಿಂದ ರಾಜ್ಯಾದ್ಯಂತ 30ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಖಾಸಗಿ ವೈದ್ಯಕೀಯ ನಿಯಂತ್ರಣ ವಿಧೇಯಕ ವಿರೋಧಿಸಿ 25 ಸಾವಿರಕ್ಕೂ ಹೆಚ್ಚು ವೈದ್ಯರು ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ವಕೀಲ ಅಮೃತೇಶ್ ಮತ್ತಿತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ವೈದ್ಯರ ಸಮಸ್ಯೆ ಏನಿದ್ದರೂ ಮುಂದೆ ನೋಡೋಣ. ಮೊದಲು ಪ್ರತಿಭಟನೆಯನ್ನು ಕೈ ಬಿಡಿ. ರೋಗಿಗಳ ಬಗ್ಗೆ ಗಮನಹರಿಸಿ. ಒಂದು ದಿನವೂ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಾಧೀಶ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು ವಿಭಾಗೀಯ ಪೀಠ ಆದೇಶ ನೀಡಿದೆ.

 

ನ್ಯಾಯಾಲಯಕ್ಕೆ ವೈದ್ಯಕೀಯ ಸಂಘಗಳು ಅಭಿಪ್ರಾಯ ತಿಳಿಸುವ ಸಂದರ್ಭ ಭಿನ್ನ ಭಿನ್ನ ಅಭಿಪ್ರಾಯಗಳು ವ್ಯಕ್ತವಾಯಿತು. ಐಎಂಸಿ ಪರ ವಕೀಲರು ಸೇವೆಗೆ ಹಾಜರಾಗುವುದಾಗಿ ನ್ಯಾಯಾಧೀಶರ  ಮುಂದೆ ತಮ್ಮ ಅಭಿಪ್ರಾಯ ತಿಳಿಸಿದರೆ ಭಾರತೀಯ ವೈದ್ಯಕೀಯ ಒಕ್ಕೂಟ ನಾಳೆ ಕೆಲಸಕ್ಕೆ ಹಾಜರಾಗುವುದಾಗಿ ತಿಳಿಸಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸುವರ್ಣಸೌಧದ ಬಳಿ ಸಾವಿರಾರು ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು ಸರಕಾರ ಮನವಿ ಮಾಡಿದರೂ ಪ್ರತಿಭಟನೆ ಹಿಂಪಡೆದಿರಲಿಲ್ಲ. ಸದ್ಯ ನ್ಯಾಯಾಲಯ ಎಚ್ಚರಿಕೆಯ ಆದೇಶವನ್ನು ನೀಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group