ವರದಿಗಾರ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅವರು ಆಕ್ಷೇಪಾರ್ಹ ರೀತಿಯಲ್ಲಿ ಜತೆಗಿರುವಂತೆ ಚಿತ್ರ ಸೃಷ್ಟಿಸಿ ಅದನ್ನು ಸಾಮಾಜಿಕ ತಾಣ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಹಾಕಿದ ಆರೋಪದ ಮೇಲೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ. ಕಿಶೋರ್ ಕುಮಾರ್, ಮುಖಂಡರಾದ ರಾಜೇಶ್ ಕಾವೇರಿ ಹಾಗೂ ರಾಜು ಪೂಜಾರಿ ವಿರುದ್ಧ ಉಡುಪಿ ನಗರದ ಸೈಬರ್, ಆರ್ಥಿಕ ಅಪರಾಧ ಮತ್ತು ಮಾದಕ ವಸ್ತು ನಿಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಬಿಜೆಪಿ ಕುಂದಾಪುರ’ ಎಂಬ ಗ್ರೂಪ್ನಲ್ಲಿ ಚಿತ್ರ ಹಾಗೂ ಅವಹೇಳನಕಾರಿ ಬರಹ ಹಾಕಲಾಗಿದೆ ಎಂದು ಸುರೇಶ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ. ಈ ಮೂವರೂ ಗ್ರೂಪ್ ಅಡ್ಮಿನ್ಗಳೆಂದು ಹೇಳಲಾಗಿದೆ.
ಪ್ರಕರಣ ದಾಖಲಾದವರು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ ಟಿಕೆಟ್ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬುವುದಾಗಿ ತಿಳಿದು ಬಂದಿದೆ.
