ರಾಷ್ಟ್ರೀಯ ಸುದ್ದಿ

ಬಿಜೆಪಿ ವಿರುದ್ಧ ಹೋರಾಟಕ್ಕೆ ಕೈ ಜೋಡಿಸುವಂತೆ ಮನಮೋಹನ್ ಸಿಂಗ್ ಕರೆ

ವರದಿಗಾರ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ ನಾಯಕತ್ವದ ಹೋರಾಟದೊಂದಿಗೆ ಕೈ ಜೋಡಿಸುವಂತೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರವರು ಎಡ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಕೊಚ್ಚಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡುತ್ತಾ, ರಾಷ್ಟ್ರೀಯ ಮಟ್ಟದಲ್ಲಿ ನಾವು ಬಿಜೆಪಿಯನ್ನು ಒಟ್ಟಾಗಿ ಸೇರಿ ವಿರೋಧಿಸೋಣವೇ ಅಥವಾ ಬಿಜೆಪಿ ಮತ್ತು ಕಾಂಗ್ರೆಸ್‌ಗಳನ್ನು ಸಿಪಿಎಂ ಸಮಾನ ದೂರದಲ್ಲಿಡುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳ ವಿರುದ್ಧದ ಹೋರಾಟದಲ್ಲಿ ಎಡಪಕ್ಷಗಳು ಪ್ರಾಮಾಣಿಕವಾಗಿದ್ದರೆ, ಅವುಗಳು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಬೇಕು ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿರುವ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಸರಕಾರವನ್ನು ಟೀಕಿಸಿದ ಅವರು, ಪಿಣರಾಯಿ ವಿಜಯನ್‌ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ರಾಜ್ಯದ ಆರ್ಥಿಕ ಪ್ರಗತಿಯೂ ನಿಧಾನವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ವರದಿ ಮಾಡಿವೆ.

Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group