ಸುತ್ತ-ಮುತ್ತ

ಜಾಲ್ಸೂರು ಪಯನೀರ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

 ವರದಿಗಾರ : ಜಾಲ್ಸೂರಿನ ಪಯನೀರ್ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 14.11.2017 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವಂತಹಾ ಶ್ರೀ ಅಬ್ದುಲ್ ರಝಾಕ್ ರವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಯಾಗಿ 5ನೆಯ ತರಗತಿಯ ವಿದ್ಯಾರ್ಥಿನಿ ಜಂಶೀನಾರವರು ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ಶ್ರೀ ರಾಜಾರಾಮ ನೆಲ್ಲಿತ್ತಾಯ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆರತಿಯವರೂ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಕ್ಕಳಿಗೆ ಶುಭಾಶಯಗಳನ್ನು ಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಶಿಕ್ಷಕಿ ಶಬನಾರವರು ಸ್ವಾಗತಿಸಿ, ಶಿಕ್ಷಕಿ ಸುಷ್ಮಿತಾರವರು ವಂದಿಸಿದರು. ಶಿಕ್ಷಕಿಯರಾದ ಸಂಧ್ಯಾ, ದೀಕ್ಷಿತಾ ಹಾಗೂ ಜ್ಯೋತಿಲಕ್ಷ್ಮಿ ಹಾಜರಿದ್ದು ಸಹಕರಿಸಿದರು. ಸಹಾಯಕ ಮುಖ್ಯ ಶಿಕ್ಷಕಿಯಾಗಿರುವ ಸುಧಾರಾಣಿಯವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group