ಸುತ್ತ-ಮುತ್ತ

ವಿಶ್ವ ಹಿಂದೂ ಪರಿಷತ್ ನ ‘ಧರ್ಮ ಸಂಸದ್’ ಮಳಿಗೆಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲು ಹೊರಡಿಸಿದ ಸುತ್ತೋಲೆ ಖಂಡನೀಯ: ಕ್ಯಾಂಪಸ್ ಫ್ರಂಟ್

ವರದಿಗಾರ : ವಿಶ್ವ ಹಿಂದೂ ಪರಿಷತ್ ಸಂಘಟನೆಯ ವತಿಯಿಂದ ಉಡುಪಿಯಲ್ಲಿ ಆಯೋಜಿಸಿರುವ ಧರ್ಮ ಸಂಸದ್ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಹಿಂದೂ ವೈಭವ ಪ್ರದರ್ಶಿನಿ ಮಳಿಗೆಗಳ ವೀಕ್ಷಣೆಗೆ ಉಡುಪಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಸುತ್ತೋಲೆ ಹೊರಡಿಸಿದ್ದು, ಇದನ್ನು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯು ತೀರ್ವವಾಗಿ ಖಂಡಿಸುತ್ತದೆ.

ಹಿಂದೂ ರಾಷ್ಟ್ರ ಎಂಬ ಅಜೆಂಡಾವನ್ನು ಸ್ಥಾಪಿಸಬೇಕೆಂಬ ಗುರಿಯಿಟ್ಟುಕೊಂಡು, ಈಗಾಗಲೇ ಹಲವು ಕೋಮುಗಲಭೆ ಹಾಗು ಭಯೋತ್ಪಾಧನಾ ಕೃತ್ಯಗಳನ್ನು ವಿಹೆಚ್‍ಪಿ ನಡೆಸಿದೆ. ಇಂತಹ  ಕಾರ್ಯಕ್ರಮಗಳ ಮೂಲಕ ವಿಹೆಚ್‍ಪಿಯು ಮುಗ್ಧ ಮಕ್ಕಳ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುವಂತಹ ಕೃತ್ಯಕ್ಕೆ ಮುಂದಾಗಿದೆ. ಆದರೆ ಮಕ್ಕಳಲ್ಲಿ ಭಾವೈಕ್ಯತೆಯನ್ನು ಮೂಡಿಸಬೇಕಾದ ಶಿಕ್ಷಣ ಇಲಾಖೆಯೇ, ಇಂಥಹ ಕೋಮುವಾದಿಗಳೊಂದಿಗೆ ಕೈಜೋಡಿಸಿರುವುದು ವಿಪರ್ಯಾಸವೇ ಸರಿ. ಈ ಘಟನೆಯ ವಿರುದ್ಧ ಸರಕಾರದ ಮೌನ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ತಕ್ಷಣವೇ ಈ ಸುತ್ತೋಲೆಯನ್ನು ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ, ಇಲ್ಲದಿದ್ದಲ್ಲಿ ಶಿಕ್ಷಣ ಇಲಾಖೆಯ ಕಛೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಕೈಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group