ರಾಜ್ಯ ಸುದ್ದಿ

ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಅನಂತ್ ಕುಮಾರ್ ರದ್ದು ದೇಶಭಕ್ತಿಯಲ್ಲ, ದ್ವೇಷ ಭಕ್ತಿ: ಮಾಜಿ ಸಚಿವ ಆರ್.ಎನ್. ನಾಯ್ಕ

▪ನಮಗೆ ಹಿಂದುತ್ವ ಬೇಡ, ಬಂಧುತ್ವ ಬೇಕು

▪ಅನಂತ್ ಕುಮಾರ್ ಹಿಂದೂ ಸಮಾಜವನ್ನು ಒಡೆಯುತ್ತಿದ್ದಾರೆ.

ವರದಿಗಾರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಗೋವಿಂದ ನಾಯ್ಕರನ್ನು ಸೋಲಿಸಲು ಕರೆ ನೀಡಿದ್ದ ಸಂಸದ ಅನಂತ್ ಕುಮಾರ್ ಹೆಗಡೆಯದ್ದು ದೇಶಭಕ್ತಿಯಲ್ಲ, ದ್ವೇಷಭಕ್ತಿಯೆಂದು ಮಾಜಿ ಸಚಿವ ಆರ್.ಎನ್. ನಾಯ್ಕ ಹೇಳಿದ್ದಾರೆ.

ಅವರು ಭಟ್ಕಳದ ಪ್ರವಾಸಿ ಬಂಗಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೋವಿಂದ ನಾಯ್ಕರನ್ನು ಸೋಲಿಸುವ ಮೂಲಕ ಅನಂತ್ ಕುಮಾರ್ ನಾಮಧಾರಿ ಸಮಾಜವನ್ನು ರಾಜಕೀಯವಾಗಿ ತುಳಿದಿದ್ದಾರೆ. ಸಚಿವರಾಗಿ ತಮ್ಮನ್ನು ತಿದ್ದಿಕೊಳ್ಳುತ್ತಾರೆ ಎಂಬ ಜನರ ಊಹೆ ಸುಳ್ಳಾಗಿದೆ ಎಂದು ಆರ್.ಎನ್. ನಾಯ್ಕರು ಅನಂತ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮಗೆ ಹಿಂದುತ್ವ ಬೇಡ, ಬಂಧುತ್ವ ಬೇಕೆಂದು ಅವರು ಕೇಳಿಕೊಂಡಿದ್ದಾರೆ. ಚುನಾವಣೆ ಸಮೀಪಿಸಿದಾಗ ಮಾತ್ರ ಜನರ ನೆನಪಾಗುವ ಇವರು ಹಿಂದೂ ಸಮಾಜವನ್ನು ಒಡೆಯುತ್ತಿದ್ದಾರೆ. ನಮಗಿನ್ನೂ ಬುದ್ಧಿ ಬಂದಿಲ್ಲ ಎಂದು ಖೇಧ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಯ ವಿರುದ್ಧ ಮಾತನಾಡುವ ಇವರು ಬ್ರಾಹ್ಮಣ ಸಮಾಜದಲ್ಲಿ ಹುಟ್ಟಿಯೂ ಬ್ರಾಹ್ಮಣರ ಕನಿಷ್ಠ ಸಂಸ್ಕಾರವನ್ನೂ ಬೆಳೆಸಿಕೊಂಡಿಲ್ಲ. ಇಂತಹ ವ್ಯಕ್ತಿಯನ್ನು ಪಕ್ಕದಲ್ಲಿ ಕುಳ್ಳಿರಿಸುವ ಯಡಿಯೂರಪ್ಪರಿಗೆ ಶೋಭೆಯಲ್ಲ ಎಂದು ಹೇಳಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಅನಂತ್ ಕುಮಾರ್ ರದ್ದು ದೇಶಭಕ್ತಿಯಲ್ಲ, ದ್ವೇಷ ಭಕ್ತಿ: ಮಾಜಿ ಸಚಿವ ಆರ್.ಎನ್. ನಾಯ್ಕ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group