ವರದಿಗಾರ: ಸಂವಿಧಾನ ತಿದ್ದುಪಡಿ ಮಾಡುವ ಅಗತ್ಯವಿದೆ ಎಂಬ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿ ವಿರುದ್ಧ ಪ್ರಗತಿಪರರು ಮೈಸೂರಿನಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ ಮುಂಭಾಗ ಪ್ರತಿಭಟನೆ ನಡೆಸಿ, ಸಂವಿಧಾನ ವಿರೋಧಿ ಪೇಜಾವರ ಶ್ರೀ ರಾಜ್ಯಬಿಟ್ಟು ತೊಲಗಲಿ ಎಂದು ಆಗ್ರಹಿಸಿದರು.
ಡಾ. ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸುತ್ತಾ, ಪೇಜಾವರ ಸ್ವಾಮೀಜಿ ನೀಡಿದ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಬಹುತ್ವದ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.
ಸಂಸತ್ತಿನಲ್ಲಿ ಗೌರಿ ಲಂಕೇಶ್ ಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ. ಆದರೆ ಸತ್ತ ದನಗಳ ಕುರಿತು ನಿರ್ಣಯ ಕೈಗೊಳ್ಳುತ್ತಾರೆ ಎಂದು ಆರೋಪಿಸಿದರು. ಚಾತುರ್ವರ್ಣ ವ್ಯವಸ್ಥೆ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಪ್ರಗತಿಪರರು ಮತ್ತಿತರರು ಭಾಗವಹಿಸಿದ್ದರು ಎಂದು ಮೂಲಗಳು ವರದಿ ಮಾಡಿವೆ.
ಪೇಜಾವರ ಸ್ವಾಮೀಜಿ ವಿರುದ್ಧ ದೂರು ದಾಖಲು:
ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚಿಸಿದ್ದಲ್ಲ ಎನ್ನುವ ಹೇಳಿಕೆಯನ್ನು ನೀಡಿದಕ್ಕಾಗಿ ಪೇಜಾವರ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
