ವರದಿಗಾರ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯನ್ನು ಸೋಲಿಸುವುದಕ್ಕಾಗಿ ಸಮರ್ಥರಾಗಿರುವ ವ್ಯಕ್ತಿ, ಪಕ್ಷಕ್ಕೆ ಮತ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತದಾರರಿಗೆ ಕರೆ ನೀಡಿದ್ದಾರೆ.
ಅವರು AAP (ಎಎಪಿ) ಪಕ್ಷದ 5ನೇ ವಾರ್ಷಿಕೋತ್ಸವದ ಪ್ರಯುಕ್ತ ದೆಹಲಿಯ ರಾಮಲೀಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಯಾವುದೇ ಪಕ್ಷ ಅಥವಾ ವ್ಯಕ್ತಿಯೇ ಆಗಲಿ ಬಿಜೆಪಿಯನ್ನು ಸೋಲಿಸಲು ಅವರಿಂದ ಸಾಧ್ಯವೆಂದಾದರೆ ಅವರಿಗೆ ಮತ ನೀಡಿ. ಎಎಪಿ ಗೆಲ್ಲಲು ಸಾಧ್ಯತೆಯಿರುವ ಕ್ಷೇತ್ರದಲ್ಲಿಎಎಪಿಗೆ ಮತ ನೀಡಿ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಗುಜರಾತಿನಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ಅವರು ಹೇಳಿದ್ದಾರೆ.
