ವರದಿಗಾರ: ಡಿಸೆಂಬರ್ 14ರಂದು ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 76 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಗುಜರಾತ್ನ ಪಶ್ಚಿಮ ಭಾಗದಲ್ಲಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ 11 ಎಸ್ಟಿ ಮತ್ತು ಮೂರು ಎಸ್ಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
182 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಗುಜರಾತ್ನಲ್ಲಿ ಡಿ.9 ಮತ್ತು 14ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ.18ರಂದು ಫಲಿತಾಂಶ ಘೋಷಣೆಯಾಗಲಿದೆ.
