ವರದಿಗಾರ (29.11.2017): 190 ಕೋಟಿ ಬಜೆಟ್ನೊಂದಿಗೆ ತಯಾರಾದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರವನ್ನು ನಿಷೇಧಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದಲ್ಲದೆ ಪದ್ಮಾವತಿ ಚಿತ್ರದ ಬಿಡುಗಡೆ ಕುರಿತಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಹಲವು ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ರಾಜಸ್ತಾನ, ಗುಜರಾತ್, ಹರಿಯಾಣ, ಮಧ್ಯಪ್ರದೇಶ ಸರಕಾರಗಳು ಚಿತ್ರದ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಮತ್ತು ಪದ್ಮಾವತಿ ಚಿತ್ರವನ್ನು ನಿಷೇಧಿಸುವಂತೆ ಒತ್ತಾಯಿಸಿತ್ತು.
ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುವ, ತಡೆಹಿಡಿಯುವ ಬಗ್ಗೆ ಕೇಂದ್ರ ಸೆನ್ಸಾರ್ ಮಂಡಳಿ ನಿರ್ಧರಿಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಚಿತ್ರದ ಕುರಿತು ಸೆನ್ಸಾರ್ ಮಂಡಳಿ ಇದುವರೆಗೆ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಇಂತಹ ಸಂದರ್ಭದಲ್ಲಿ ಚಿತ್ರಕ್ಕೆ ಪ್ರಮಾಣಪ್ರತ ನೀಡಬೇಕೆ ಅಥವಾ ಬೇಡವೇ ಎಂಬುಂದರ ಬಗ್ಗೆ ರಾಜಕೀಯ ಮುಖಂಡರು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಎಚ್ಚರಿಸಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವವರು ವಿವಾದಾತ್ಮಕ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಜನಪ್ರತಿನಿಧಿಗಳನ್ನು ಎಚ್ಚರಿಸಿದೆ.
