ರಾಜ್ಯ ಸುದ್ದಿ

ಜೆಡಿಎಸ್ ಜೊತೆಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡುವುದಿಲ್ಲ: ಸಿದ್ಧರಾಮಯ್ಯ ಸ್ಪಷ್ಟನೆ

ವರದಿಗಾರ (29.11.2017): ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಮಾಲೋಚನೆ ಸಂದರ್ಭ ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ ಅನುಮಾನಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜತ್ಯಾತೀತ ಜನತಾ ದಳ (ಜೆಡಿಎಸ್) ಜೊತೆಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಮಾಲೋಚನೆ ಸಭೆಯಲ್ಲಿ ಈ ಬಗ್ಗೆ ಮಾತನಾಡಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳು ಹರಡಿವೆ ಎಂದು ಕಾರ್ಯಕರ್ತರು ಹೇಳಿದಾಗ, ಅಂತಹ ಯಾವ ಸಾಧ್ಯತೆಗಳೂ ಇಲ್ಲ. ರಾಜ್ಯದ ಯಾವುದೇ ಭಾಗದಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾರ್ಯಕರ್ತರಿಗೆ ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group