ರಾಜ್ಯ ಸುದ್ದಿ

ಬಿಜೆಪಿ ನಾಯಕರ ಮನಸ್ಸು ಕಸದ ತೊಟ್ಟಿ, ಅವರು ದ್ವೇಷ ಹುಟ್ಟು ಹಾಕುವ ಯಂತ್ರ: ದಿನೇಶ್‌ ಗುಂಡೂರಾವ್‌

ವರದಿಗಾರ (30.11.2017):  ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಶಾಸಕ ಸಿ.ಟಿ.ರವಿ , ಸಂಸದ ಪ್ರತಾಪ್ ಸಿಂಹ ಮುಂತಾದವರ ಮನಸ್ಸು ಕಸದ ತೊಟ್ಟಿ. ಬೇಕಾ ಬಿಟ್ಟಿ ಕೀಳು ಮಟ್ಟದ ಮಾತುಗಳನ್ನೇ ಅವರು ಆಡುತ್ತಾರೆ. ಆ ರೀತಿ ಮಾತನಾಡುವುದು ನಮ್ಮ ಸಂಸ್ಕೃತಿಯಲ್ಲ. ನಾವು ಮಾತಿನಲ್ಲಿ ಸಭ್ಯತೆಯನ್ನು ಮೀರುವುದಿಲ್ಲ. ಅನಂತ್ ಕುಮಾರ್ ಹೆಗಡೆಯಂತೂ ದ್ವೇಷವನ್ನು ತಯಾರು ಮಾಡುವ ಯಂತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ದಿನೇಶ್‌ ಗುಂಡೂರಾವ್‌ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಇ. ರಾಧಾಕೃಷ್ಣ ರವರು ಬೆಂಗಳೂರಿನಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಂದರ್ಭ ಈ ಹೇಳಿಕೆಯನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತರಾಗಿರುವ ಅನಂತ್ ಕುಮಾರ್ ಹೆಗಡೆ ಮಾತುಗಳಲ್ಲಿ ಸಂಸ್ಕೃತಿಯ ಲವಲೇಶವೂ ಇಲ್ಲ. ಇಂತಹವರು ಮುಖ್ಯಮಂತ್ರಿ ಆದರೆ ರಾಜ್ಯದ ಗತಿ ಏನು ಎಂದು ಪತ್ರಕರ್ತರೊಂದಿಗೆ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಪ್ರೊ.ಕೆ.ಇ.ರಾಧಾಕೃಷ್ಣ ಮಾತನಾಡುತ್ತಾ, ಬಿಜೆಪಿ ನಾಯಕರು ಮೌಖಿಕವಾಗಿ ಭೇದಿ ಮಾಡುವವರು ಮತ್ತು ಮಾನಸಿಕವಾಗಿ ಮಲಬದ್ಧತೆಯುಳ್ಳವರು ಎಂದು ಹೇಳಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group