ರಾಷ್ಟ್ರೀಯ ಸುದ್ದಿ

ಮೋದಿ ನೈಜ ಹಿಂದೂ ಅಲ್ಲ: ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್

ವರದಿಗಾರ(01.12.2017) : ಪ್ರಧಾನಿ ನರೇಂದ್ರ ಮೋದಿ ನಿಜವಾದ ಹಿಂದೂ ಅಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮನಾಥ ದೇವಸ್ಥಾನ ಪ್ರವೇಶ ವಿವಾದದ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಧಾನಿ ಮೋದಿಯವರನ್ನು ಹಿಂದೂ ಅಲ್ಲ ಎಂದು ಹೇಳಿದ್ದಾರೆ.”ಪ್ರಧಾನಿ ನರೇಂದ್ರ ಮೋದಿ ನಿಜವಾದ ಹಿಂದೂ ಅಲ್ಲ. ಈ ಜನರು (ಬಿಜೆಪಿ) ಹಿಂದೂ ಧರ್ಮವನ್ನು ಮರೆತಿದ್ದಾರೆ ಮತ್ತು ಬದಲಿಗೆ ಹಿಂದುತ್ವವನ್ನು ಅಳವಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನೈಜ ಹಿಂದೂ ಎಂದಿಗೂ ತಾರತಮ್ಯವನ್ನು ಮಾಡುವುದಿಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಾರೆ. ಆದರೆ, ಮೋದಿ ಹಿಂದುತ್ವವಾದಿಯಾಗಿದ್ದು, ವಿಭಜನೆ ಇವರ ತತ್ವವಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಅಲ್ಲದೇ, ಇಂಥವರು ಆಗಾಗ್ಗೆ ದೇವಸ್ಥಾನಕ್ಕೆ ಹೋಗುವುದು ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ. ಜೊತೆಗೆ, ಪ್ರತಿಯೊಬ್ಬ ಭಾರತೀರಯನ್ನೂ ಸೋದರ, ಸೋದರಿ ಅಥವಾ ತಾಯಿ ಎಂದು ಪರಿಗಣಿಸುವವರು ಮಾತ್ರ ನೈಜ ಹಿಂದೂಗಳು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group