ರಾಜ್ಯ ಸುದ್ದಿ

ಬಿಜೆಪಿ ಮುಖಂಡನಿಂದ ಪತ್ರಕರ್ತನಿಗೆ ಹಲ್ಲೆ ಖಂಡಿಸಿ ಪತ್ರಕರ್ತರಿಂದ ಪ್ರತಿಭಟನೆ

ವರದಿಗಾರ (03.12.2017): ಬಿಜೆಪಿ ಮುಖಂಡನಿಂದ ಪತ್ರಕರ್ತನಿಗೆ ಹಲ್ಲೆ ಖಂಡಿಸಿ,  ಪತ್ರಕರ್ತರು ಗುಲ್ಬಾರ್ಗಾ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬಿಜೆಪಿ ಜಿಲ್ಲಾ ಘಟಕದ ‍ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿಶಂಕರ್, ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಬಾವಿಕಟ್ಟೆ ನಾಗಣ್ಣ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಬಿಟಿವಿ ವಾಹಿನಿ ಜಿಲ್ಲಾ ವರದಿಗಾರ ವಾಗೀಶ್ ಶನಿವಾರ ತುಮಕೂರ್ ನಗರದ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಉಡುಪಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಜ್ಯೋತಿಗಣೇಶ್ ಪತ್ರಿಕಾಗೋಷ್ಠಿ ಕರೆದಿದ್ದರು. ನಾನು ಅಲ್ಲಿಗೆ ಹೋದಾಗ ಎದುರಿಗೆ ಸಿಕ್ಕ ರವಿಶಂಕರ್ ಮತ್ತು ನಾಗಣ್ಣ ಅವರಿಬ್ಬರು ‘ಇಲ್ಲ ಸಲ್ಲದ ವರದಿ ಮಾಡುತ್ತೀಯಾ’ ಎಂದು ಆರೋಪಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದರು’ ಎಂದು ದೂರಿನಲ್ಲಿ ವಿವರಿಸಿದ್ದಾರೆ.

‘ಸಮಗ್ರ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ತಿಳಿಸಿದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group