ರಾಜ್ಯ ಸುದ್ದಿ

ಪೊಲೀಸರು ‘ಬ್ಯಾರಿಕೇಡ್ ಹಾಕಿದ್ದೇ ತಪ್ಪು’ ಎಂದ ಯಡಿಯೂರಪ್ಪ

ವರದಿಗಾರ (05.12.2017):  ಹುಣಸೂರಿನಲ್ಲಿ ಆದಿತ್ಯವಾರ ನಡೆದ ಘಟನೆಯಲ್ಲಿ ಸಂಸದ ಪ್ರತಾಪ್‌ ಸಿಂಹ ರು ಬ್ಯಾರಿಕೇಡ್‌ಗೆ ವಾಹನ ಗುದ್ದಿಸಿಲ್ಲ,  ಅಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದೇ ತಪ್ಪು ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ

ಯಾವುದೇ ಜಾತಿಯವರು ಜಯಂತಿಗಳನ್ನು ಆಚರಿಸಲು ಯಾರ ಅಪ್ಪಣೆ ಏಕೆ ಬೇಕು? ಎಂದು ಇದೇ ಸಂದರ್ಭ ಅವರು ಕಾನೂನನ್ನು ಪ್ರಶ್ನಿಸಿದ್ದಾರೆ. ಘಟನೆಯಲ್ಲಿ  ಬಂಧಿತರಾದ ಬಿಜೆಪಿ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಸಂಸದ ಪ್ರತಾಪ್ ಸಿಂಹ ಅವರ ವೈರಲ್ ವೀಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ,  ‘ಉಗ್ರ ಸ್ವರೂಪದ ಪ್ರತಿಭಟನೆ’ ನಡೆಸುವಂತೆ ಅಮಿತ್‌ ಷಾ ಸೂಚಿಸಿದ್ದಾರೆ ಎಂದು ಪ್ರತಾಪ್‌ ಸಿಂಹ ಹೇಳಿದ ಆಡಿಯೊ ವೈರಲ್‌ ಆಗಿದೆ ಎನ್ನುವುದು ಅರ್ಥಹೀನ. ಇದು ಸುಳ್ಳು ಮಾಹಿತಿ. ವಿನಾಕಾರಣ ಅಮಿತ್‌ ಷಾ ಹೆಸರು ಎಳೆದು ತರುತ್ತಿದ್ದಾರೆ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group