ಜಿಲ್ಲಾ ಸುದ್ದಿ

“ಮಳೆ ಹನಿ” ಪುಸ್ತಕ ಬಿಡುಗಡೆ ಸಮಾರಂಭ

ವರದಿಗಾರ-ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ಪ್ರಧಾನ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್‍ ರವರ “ಮಳೆ ಹನಿ” ಪುಸ್ತಕ ಬಿಡುಗಡೆ ಸಮಾರಂಭವು ನಗರದ ಸರಕಾರಿ ರಾಜ್ಯ ನೌಕರರ ಭವನದಲ್ಲಿ ನಡೆಯಿತು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊೈದಿನ್ ಬಾವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದರು.
ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ದ.ಕ. ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್, ಎಂ. ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಲಹೆಗಾರ ರಫೀಕ್ ಮಾಸ್ಟರ್, ದಿನೇಶ್ ಹೊಳ್ಳ, ಡಿ.ಐ. ಅಬೂಬಕರ್ ಕೈರಂಗಳ, ಯಂಶ ಬೇಂಗಿಲ, ಆಶಿಕ್ ಕುಕ್ಕಾಜೆ ಉಪಸ್ಥಿತರಿದ್ದರು.
ಈ ಸಂದರ್ಭ ಸಾಮಾಜಿಕ ಕ್ಷೇತ್ರದ ಸಾಧನೆಗೆ ಹನೀಫ್ ಹಾಜಿ ಗೋಳ್ತಮಜಲುರವರನ್ನು ಹಾಗೂ ಕಲಾಕ್ಷೇತ್ರದ ಸಾಧನೆಗೆ ತಾರಾನಾಥ್ ಕೈರಂಗಳರವರನ್ನು ಸನ್ಮಾನಿಸಲಾಯಿತು. ಕವಿಗೋಷ್ಠಿ ಮತ್ತು ವ್ಯಕ್ತಿತ್ವ ವಿಕಸನ ತರಗತಿ ನಡೆಯಿತು.
ಅಕ್ಷರ ಪತ್ರಿಕೆಯ ಉಪ ಸಂಪಾದಕ ಎಂ.ಎಂ. ಮಅರೂಫ್ ಆತೂರು ಕಾರ್ಯಕ್ರಮ ನಿರೂಪಿಸಿ, ವಿದ್ಯಾ ಟುಟೋರಿಯಲ್ ಸಂಚಾಲಕ ಕಬೀರ್ ಮಾಸ್ಟರ್ ವಂದಿಸಿದರು.
'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group