ರಾಜ್ಯ ಸುದ್ದಿ

ಶಿರಸಿಯಲ್ಲಿ ಹಿಂಸಾಚಾರ ಮುಂದುವರಿಸಿದ ಸಂಘಪರಿವಾರ ಕಾರ್ಯಕರ್ತರು

ವರದಿಗಾರ (ಡಿ.12): ಹೊನ್ನಾವರದ ಪರೇಶ ಮೇಸ್ತಾ ಸಾವಿನ‌ ಪ್ರಕರಣದ ಹಿನ್ನಲೆಯಲ್ಲಿ ನಗರದಲ್ಲಿ ಬಂದ್‌ಗೆ ಕರೆ ನೀಡಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿ.14ರವರೆಗೆ ಸಭೆ, ಸಮಾರಂಭ, ಮೆರವಣಿಗೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೋಮವಾರ ಆದೇಶಿಸಿದ್ದರೂ , ಜಿಲ್ಲೆಯಾದ್ಯಂತ ಮೆರವಣಿಗೆಗೆ ನಿಷೇಧವಿದ್ದರೂ ಸಂಘಪರಿವಾರದ ಕಾರ್ಯಕರ್ತರು ಶಿರಸಿ ವಿಕಾಸಾಶ್ರಮ ಮೈದಾನದಲ್ಲಿ ಪ್ರತಿಭಟನಾ ಮೆರವಣಿಗೆಗೆ ಮುಂದಾದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಸೇರಿ ಇತರೆ ಹಿಂದೂ ಸಂಘನೆಗಳ ಪ್ರಮುಖರನ್ನು ಬಂಧಿಸಲಾಗಿದೆ.

ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಹಿಂದೂ ಕಾರ್ಯಕರ್ತರು ಪಟ್ಟು ಹಿಡಿದರೆ, ಯಾವುದೇ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟವಾಗಿ ಹೇಳಿದರು.

ಕಂಡಕಂಡ ಕಡೆ ಉದ್ರಿಕ್ತ ಗುಂಪು ಕಲ್ಲು ತೂರಿದೆ. ಹೀಗಾಗಿ ಕೆಲ ಮಾಧ್ಯಮದವರನ್ನೂ ಒಳಗೊಂಡು ಪೊಲೀಸರಿಗೂ ಕಲ್ಲುಗಳು ತಾಗಿ ಗಾಯವಾಗಿದೆ. ಶಿರಸಿಯ ವಿವಿಧ ಭಾಗಗಳಲ್ಲಿ ಉದ್ರಿಕ್ತರ ಗುಂಪು ಟೈರ್‌ಗಳಿಗೆ ಬೆಂಕಿ ಹಚ್ಚಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ್ದಾರೆ ಮತ್ತು ಅಶ್ರವಾಯು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಇದೇ ಸಂದರ್ಭದಲ್ಲಿ ನಗರದಲ್ಲಿರುವ ಮುಸ್ಲಿಮರ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, 15ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿಯಾಗಿದೆ. ಪ್ರಸಿಡೆಂಟ್ ಹೊಟೇಲ್ ಗಾಜು ಒಡೆದಿದೆ. ವರದಿನಿರತರಾಗಿದ್ದ ಇಬ್ಬರು ಪತ್ರಕರ್ತರು ಗಾಯಗೊಂಡಿದ್ದಾರೆ. ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಅನೇಕರ ಮೊಬೈಲ್ ಕಸಿದ ಉದ್ರಿಕ್ತರು ಒಡೆದು ಹಾಕಿದ್ದಾರೆ.

ಗದಗ ಎಸ್ಪಿ ಸಂತೋಷಬಾಬು, ಚಿತ್ರದುರ್ಗ ಎಡಿಷನಲ್ ಎಸ್ಪಿ ರಾಮಸಿದ್ದಿ, ಐಜಿಪಿ ಹೇಮಂತ ನಿಂಬಾಳಕರ್ ನೇತೃತ್ವದಲ್ಲಿ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಪ್ರತಿಭಟನೆ ನಡೆಸಿದ ಸ್ಥಳವಾದ ವಿಕಾಸಾಶ್ರಮ ಮೈದಾನದ ಸುತ್ತ ಇರುವ ಎಲ್ಲ ಬೈಕ್ ಗಳನ್ನು ಗಾಡಿಗೆ ತುಂಬುತ್ತಿದ್ದಾರೆ.

ಈ ಸ್ಥಳದಿಂದ ಚದುರಿರುವ ಪ್ರತಿಭಟನಾಕಾರರು ಐದು ರಸ್ತೆ ವೃತ್ತದಲ್ಲಿ ಸೇರಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಎಸ್ಪಿ ವಿನಾಯಕ‌ ಪಾಟೀಲ ಸ್ಥಳದಲ್ಲಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group