ಜಿಲ್ಲಾ ಸುದ್ದಿ

ಮಾಹಿತಿ ಹಕ್ಕು ಕಾರ್ಯಕರ್ತರನ್ನು ಧಮನಿಸುವುದು ಖಂಡನೀಯ: ಗಿರೀಶ್ ಗೌಡ ಬೆಂಗಳೂರು

ವರದಿಗಾರ(ಡಿ.12):  ಸಂಘ ಸಂಸ್ಥೆಗಳ ಹೆಸರಿನಲ್ಲಿ ಭ್ರಷ್ಟಾಚಾರ ಹಗರಣಗಳು ಹೆಚ್ಚುತ್ತಿದ್ದು ಅವುಗಳ ಕಡಿವಾಣಕ್ಕೆ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಾಜ್ಯಾಧ್ಯಕ್ಷರಾದ ಗಿರೀಶ್ ಗೌಡ ಬೆಂಗಳೂರಿನಲ್ಲಿ ಹೇಳಿದ್ದಾರೆ.

ದ. ಕ. ಜಿಲ್ಲೆಯ ಪುತ್ತೂರಿನ ಈಶ್ವರಮಂಗಳದಲ್ಲಿ RTI ಕಾರ್ಯಕರ್ತನ ಕೊಲೆಯತ್ನದ ಬಗ್ಗೆ ಪ್ರಸ್ತಾಪಿಸಿದ ಅವರು ಸಮಾಜದ ಕೆಲವು ಪ್ರಭಾವಿ ವ್ಯಕ್ತಿಗಳು ಟ್ರಷ್ಟಿಗಳನ್ನು ದುರುಪಯೋಗ ಮಾಡುತ್ತಿದ್ದು ಅಗಲಿದ ಹೆಸರಾಂತ ಸ್ವಾಮಿಗಳ ಗುರುಗಳ ಹೆಸರಿನಲ್ಲಿ ಟ್ರಸ್ಟ್ ಕಟ್ಟಿಕೊಂದಿದ್ದು ಜನ ಸಾಮಾನ್ಯರು ಅನುಕಂಪದ ಹೆಸರಿನಲ್ಲಿ ದಾನ ಮಾಡುತ್ತಾರೆ. ಭ್ರಷ್ಟರು ಇದನ್ನೇ ಬಂಡವಾಳವನ್ನಾಗಿ ಮಾಡುತ್ತಿದ್ದಾರೆ. ಇಂತಹ ಹೆಸರುಗಳಲ್ಲಿ ಟ್ರಸ್ಟ್ ನೊಂದಾವಣೆ ಮಾಡದಂತೆ ಸರಕಾರ ಕೂಡಲೇ ಸುತ್ತೋಲೆ ಹೊರಡಿಸುವಂತೆ ಅವರು ಸರಕಾರವನ್ನು ಆಗ್ರಹಿಸಿದರು.

ಅವ್ಯವಹಾರ ಅಕ್ರಮಗಳ ಕುರಿತು ಮಾಹಿತಿ ಪಡೆಯೂದು ಪ್ರತಿಯೋರ್ವನ ಸಂವಿಧಾನ ಬದ್ಧ ಹಕ್ಕಾಗಿದ್ದು ಇದಕ್ಕಾಗಿ ಹೋರಾಡುವವರನ್ನು ಧಮನಿಸುವ ಪ್ರಯತ್ನಗಳು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿರುವುದಕ್ಕೆ ಅವರು ಖೇಧ ವ್ಯಕ್ತಪಡಿಸಿದ್ದಾರೆ.

ವರದಿ: ಸುನ್ನಿ ರೋಸ್

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group