ರಾಷ್ಟ್ರೀಯ ಸುದ್ದಿ

ನರೇಂದ್ರ ಮೋದಿಯ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತನ ಆತ್ಮಹತ್ಯೆ!

ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿದ ಮಹಾರಾಷ್ಟ್ರದ ರೈತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯ ಮುನ್ನ ಪ್ರಚಾರಕ್ಕಾಗಿ ನಡೆಸಿದ್ದ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತ, ಸಾಲದ ಹೊರೆಯಿಂದ ಆತ್ಮಹತ್ಯೆ ನಡೆಸಿದ ಘಟನೆ ಮಹಾರಾಷ್ಟ್ರದಿಂದ ವರದಿಯಾಗಿದೆ.

2014ರ ಲೋಕಸಭಾ ಚುನಾವಣೆಯ ಮುನ್ನ, ಮಾರ್ಚ್ 20ರಂದು ನರೇಂದ್ರ ಮೋದಿಯವರು ಮಹಾರಷ್ಟ್ರದ ದಭಾಡಿ ಜಿಲ್ಲೆಯಲ್ಲಿ ರೈತರೊಂದಿಗೆ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮವನ್ನು ನಡೆಸಿದ್ದರು. ಅದರಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿಯವರೊಂದಿಗೆ ಮಾತುಕತೆ ನಡೆಸಿದ್ದರು. ದಭಾಡಿಯ ರೈತ ಕೈಲಾಸ್ ಕಿಸಾನ್ ಮಾನ್ಕರ್(27) ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆದರೆ, ಕೈಲಾಸ್ ಸಾಲದ ಹೊರೆ ತಾಳಲಾರದೆ ಸೋಮವಾರದಂದು ಸಂಜೆ ವಿಷಾಹಾರ ಸೇವಿಸಿ ಆತ್ಮಹತ್ಯೆಗೆ ಶರಣಾದರು.

ಮಹಾರಾಷ್ಟ್ರದ ದಾಭಾಡಿ ಜಿಲ್ಲೆಯು 2014ರಲ್ಲಿ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮದ ಕಾರಣ ದೇಶದ ಗಮನ ಸೆಳೆದಿತ್ತು. ಅಂದು ನರೇಂದ್ರ ಮೋದಿಯವರು ರೈತರಿಗೆ ಹಲವಾರು ಯೋಜನೆಗಳ ಭರವಸೆ ನೀಡಿದ್ದರು. ಲೋಕಸಭಾ ಚುನಾವಣೆಯ ಕೆಲವೇ ತಿಂಗಳಲ್ಲಿ ನಡೆದ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತದಿಂದ ಆಯ್ಕೆಯಾಗಿತ್ತು. ಇದೀಗಾಗಲೇ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗಳಿಂದ ತೀವ್ರ ಟೀಕೆಗೊಳಗಾಗಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ, ತಮ್ಮ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ರೈತನ ಆತ್ಮಹತ್ಯೆಯು ತೀವ್ರ ಮುಜುಗರವನ್ನುಂಟು ಮಾಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group