ರಾಜ್ಯ ಸುದ್ದಿ

ಬಿಜೆಪಿ ಎಂದರೆ ‘ಬೆಂಕಿ-ಜಗಳ ಹಚ್ಚು ಪಕ್ಷ’: ದಿನೇಶ್ ಗೂಂಡೂರಾವ್

ವರದಿಗಾರ (ಡಿ.14): ಬಿಜೆಪಿ ಎಂದರೆ ಬೆಂಕಿ (ಬಿ), ಜಗಳ (ಜೆ) ಹಚ್ಚುವ ಪಕ್ಷವೇ(ಪಿ) ಬಿಜೆಪಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕೊಪ್ಪಳದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಗೆ ನೂತನ ನಾಮಕರಣ ಮಾಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು,  ಅತ್ಯಂತ ಬೇಜವಾಬ್ದಾರಿಯುತ ವಿರೋಧ ಪಕ್ಷ ರಾಜ್ಯದಲ್ಲಿದೆ. ರಾಜ್ಯದಲ್ಲಿ 8–10 ಸಾವು ಸಂಭವಿಸಿದರೆ ಬಿಜೆಪಿಯವರು ರಾಜಕೀಯ ಮಾಡಲು, ಗಲಾಟೆ ಎಬ್ಬಿಸಲು ಅವಕಾಶ ಸಿಕ್ಕಿತು ಎಂದು ಖುಷಿ ಪಡುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾ ಅಡ್ಡಾಡುತ್ತಿದ್ದಾರೆ. ಬಹಿರಂಗ ಚರ್ಚೆಗೆ ಅವರು ಸಿದ್ಧರಿಲ್ಲ. ರಾಜ್ಯಕ್ಕೆ ಕೇಂದ್ರ ಸರಕಾರದ ಅನುದಾನ ಕೊಡುವಲ್ಲಿ ತಾರತಮ್ಯ ಆಗುತ್ತಿದೆ. ಈ ಬಗ್ಗೆ ಕೇಂದ್ರದ ಜತೆ ಯಡಿಯೂರಪ್ಪ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group