ಜಿಲ್ಲಾ ಸುದ್ದಿ

ಚಾಮರಾಜನಗರ: ಎಸ್.ಡಿ.ಪಿ.ಐ ವತಿಯಿಂದ ಸಾರ್ವಜನಿಕ ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ವರದಿಗಾರ (ಡಿ.17): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ವತಿಯಿಂದ ಚಾಮರಾಜನಗರದ ಗಾಳೀಪುರ ಮುಖ್ಯರಸ್ತೆಯಲ್ಲಿರುವ ಜಾಫರ್ ಕಾಂಪ್ಲೆಕ್ಸ್ ನಲ್ಲಿ ಸಾರ್ವಜನಿಕ ಮಾಹಿತಿ ಸೇವಾ ಕೇಂದ್ರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್‍ ಮಜೀದ್ ಉದ್ಘಾಟಿಸಿ, ಸಮಾಜಕ್ಕೆ ಅರ್ಪಿಸಿದರು.

ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗಲಿ ಮತ್ತು ಸರ್ವ ಮಾಹಿತಿಯನ್ನು ನೀಡುವ ಉದ್ದೇಶಗಳೊಂದಿಗೆ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಮಾಹಿತಿ ಸೇವಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಮಾಹಿತಿ ಸೇವಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸರಕಾರದಿಂದ ದೊರೆಯುವ ಸೌಲಭ್ಯ, ಸವಲತ್ತುಗಳು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪಠ್ಯಕ್ಕೆ ಸಂಬಂಧಪಟ್ಟಂತಹ ವಿಷಯ, ಉದ್ಯೋಗದ ಬಗ್ಗೆ ಮಾಹಿತಿ ನೀಡಲಾಗುವುದು. ಇದೊಂದು ಸಮಾಜಮುಖಿ ಕೆಲಸವಾಗಿದೆ ಇಂತಹ ಕೆಲಸಗಳು ನಗರದಲ್ಲಿ ಹೆಚ್ಚು ನಡೆಯಲಿ ಎಂದು ಆಶಿಸಿದರು.

ಅರೇಬಿಕ್ ಶಾಲೆಯ ಮುಖ್ಯಸ್ಥರಾದ ಮೌಲಾನ ಇಸ್ಮಾಯಿಲ್, ಜೊಹರಾ ಮಸೀದಿಯ ಗುರುಗಳಾದ ಮೌಲಾನ ಲುತ್ಫಿ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾಖಾನ್, ಪ್ರಧಾನ ಕಾರ್ಯದರ್ಶಿ ಜಬೀನೂರ್, ನಗರಸಭಾ ಸದಸ್ಯರಾದ ಎಂ.ಮಹೇಶ್, ಸಿ.ಎಸ್.ಸೈಯದ್‍ ಆರೀಫ್, ಸೈಯದ್‍ಇಮ್ರಾನ್, ಪಿಎಫ್‍ಐ ಜಿಲ್ಲಾಧ್ಯಕ್ಷ ಮಹಮ್ಮದ್‍ ಅಜೀಂ ಮತ್ತಿತರರು ಉಪಸ್ಥಿತರಿದ್ದರು.

Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group