ರಾಜ್ಯ ಸುದ್ದಿ

ಧರ್ಮ ಸಂಸತ್‌  ಕಾರ್ಯಕ್ರಮ ಬಿಜೆಪಿಯನ್ನು ಬೆಂಬಲಿಸುವುದಕ್ಕಾಗಿ ಹಮ್ಮಿಕೊಳ್ಳಲಾಗಿತ್ತು: ನಿಡುಮಾಮಿಡಿ ಸ್ವಾಮೀಜಿ

ವರದಿಗಾರ (ಡಿ.17): ಇತ್ತೀಚೆಗೆ ಉಡುಪಿಯಲ್ಲಿ ನಡೆದ ಧರ್ಮ ಸಂಸತ್‌ ಕಾರ್ಯಕ್ರಮ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಪರವಾಗಿ ಅಭಿಪ್ರಾಯ ರೂಪಿಸುವುದು ಮತ್ತು  ಬಿಜೆಪಿಯನ್ನು ಬೆಂಬಲಿಸುವುದಕ್ಕಾಗಿ ಹಮ್ಮಿಕೊಳ್ಳಲಾಗಿತ್ತು ಎಂದು ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಮಾಜದ ಕಣ್ಣೊರೆಸಲು ಅಸ್ಪೃಶ್ಯತೆ ಹೋಗಬೇಕು ಎನ್ನುತ್ತಾರೆ. ಅಸ್ಪೃಶ್ಯರು ಮತಾಂತರವಾದರೆ ಅವರಿಗೆ ಹಿಂಬಾಲಕರು ಇರುವುದಿಲ್ಲ. ಅಸ್ಪೃಶ್ಯರು ಮತ ಬ್ಯಾಂಕಾಗಿ ಮಾತ್ರ ಇರಬೇಕು ಎನ್ನುವುದು ಧರ್ಮ ಸಂಸತ್ ನಡೆಸಿದವರ ಉದ್ದೇಶವಾಗಿತ್ತು ಎಂದರು.  ಧರ್ಮ ಸಂಸತ್‌ ಎನ್ನುವುದೇ ಪೂರ್ವಾಗ್ರಹಪೀಡಿತ. ಗೋಹತ್ಯೆ ನಿಷೇಧ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಅಲ್ಪಸಂಖ್ಯಾತರಿಗೆ ಕೊಡುವ ಸೌಲಭ್ಯಗಳನ್ನು ಬಹುಸಂಖ್ಯಾತರಿಗೂ ವಿಸ್ತರಿಸಿ ಎನ್ನುವ ಕಾರ್ಯಸೂಚಿಯನ್ನು ಈ ಕಾರ್ಯಕ್ರಮ ಹೊಂದಿತ್ತು.

ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂ ರಾಜಕಾರಣಕ್ಕೆ ಪೋಷಕರಾಗಿ ಕೆಲಸ ಮಾಡಿದವರು ಮಾಧ್ವ ಮತದವರು. ಈಗಲೂ ಅವರೇ ನಾಯಕತ್ವ ವಹಿಸಿಕೊಂಡಿದ್ದಾರೆ. ಶೃಂಗೇರಿ ಶ್ರೀಗಳು, ಶ್ರೀವೈಷ್ಣವ ಪರಂಪರೆಯ ವಿಶಿಷ್ಟ ದ್ವೈತಿಗಳು ಯಾವ ವಿಚಾರದಲ್ಲೂ ಬಾಯಿ ಬಿಡುತ್ತಿಲ್ಲ. ಎಲ್ಲಕ್ಕೂ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ವಿಶ್ವೇಶತೀರ್ಥ ಸ್ವಾಮೀಜಿ ಮಾತ್ರ ಪ್ರತಿಕ್ರಿಯಿಸುತ್ತಿದ್ದಾರೆ ಎಂದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group