ರಾಜ್ಯ ಸುದ್ದಿ

ದಲಿತರನ್ನು ಹೀಯಾಳಿಸಿದ ಶಾಸಕ ಉಮೇಶ್ ಕತ್ತಿ ವಿರುದ್ಧ ಪ್ರಕರಣ ದಾಖಲು

ವರದಿಗಾರ (ಡಿ.17):ಹುಕ್ಕೇರಿ ಶಾಸಕ ಉಮೇಶ್ ಕತ್ತಿ ವಿರುದ್ಧ ದಲಿತರನ್ನು ಹೀಯಾಳಿಸುವ ನಿಷೇಧಿತ ಪದ ಬಳಸಿದ ಆರೋಪದ ಮೇಲೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಶಾಸಕ ಕತ್ತಿ, ಮೀಸಲಾತಿ ಕುರಿತು ಚರ್ಚಿಸುವ ಸಂದರ್ಭವೊಂದರಲ್ಲಿ ದಲಿತರನ್ನು ಹೀಯಾಳಿಸುವಂತಹ ಪದ ಬಳಸಿದ್ದರು. ಅವರು ಮಾತನಾಡಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಈ ಮೂಲಕ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಸುನೀಲ್ ಕಲ್ಲಪ್ಪ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಶಾಸಕರ ಜನವಿರೋಧಿ ಹೇಳಿಕೆಯನ್ನು ಖಂಡಿಸಿ, ಚಿಕ್ಕೋಡಿ, ಹುಕ್ಕೇರಿಯಲ್ಲಿ ದಲಿತ ಸಂಘಟನೆಗಳು, ಸಾರ್ವಜನಿಕರು ಪ್ರತಿಭಟನೆ ನಡೆಸಿ, ಶಾಸಕರ ರಾಜೀನಾಮೆ ಮತ್ತು ಬಹಿರಂಗ ಕ್ಷಮೆಯಾಚನೆಗೆ ಒತ್ತಾಯಿಸಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group