ರಾಷ್ಟ್ರೀಯ ಸುದ್ದಿ

ಪಂಜಾಬ್ ಸ್ಥಳೀಯಾಡಳಿತ ಚುನಾವಣೆ: ಕಾಂಗ್ರೆಸ್ ಗೆ ಭರ್ಜರಿ ಜಯ, ಬಿಜೆಪಿ-ಶಿರೋಮಣಿ ಅಕಾಲಿ ದಳಕ್ಕೆ ಮುಖಭಂಗ

ವರದಿಗಾರ(17-12-2017) : ಪಂಜಾಬಿನಲ್ಲಿ ನಡೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಭರ್ಜರಿ ಜಯ ಸಾಧಿಸಿದೆ. ಎಲ್ಲಾ ಮೂರು ಮಹಾನಗರ ಪಾಲಿಕೆಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್, 29 ರಲ್ಲಿ 20 ನಗರ ನಿಗಮ ಹಾಗೂ ನಗರ ಪಂಚಾಯತ್ ಗಳನ್ನೂ ತನ್ನ ಪಾಲಾಗಿಸಿಕೊಂಡಿದೆ.

ಪಟಿಯಾಲದ 60 ಸದಸ್ಯರ ಪಾಲಿಕೆಯಲ್ಲಿ ಬಿಜೆಪಿ-ಅಕಾಲಿದಳ ಒಂದೇ ಒಂದು ಸ್ಥಾನವನ್ನು ಗೆಲ್ಲಲೂ ವಿಫಲವಾಗಿದೆ. ಜಲಂಧರ್ ಮಹಾನಗರ ಪಾಲಿಕೆಯ 80 ವಾರ್ಡುಗಳಲ್ಲಿ 66 ಸ್ಥಾನಗಳಲ್ಲಿ ಕಾಂಗ್ರೆಸ್ ವಿಜಯಿಯಾಗಿದೆ. ಶಿರೋಮಣಿ ಅಕಾಲಿದಳವು 4 ಸ್ಥಾನಗಳನ್ನು ಪಡೆದುಕೊಂಡಿದೆ ಹಾಗೂ ಬಿಜೆಪಿ 8 ಸ್ಥಾನಗಳೊಂದಿಗೆ ತೃಪ್ತಿಪಡಬೇಕಾಗಿದೆ. ಉಳಿದ ಎರಡು ಸ್ಥಾನಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ಅಮೃತಸರ್ ಮಹಾನಗರ ಪಾಲಿಕೆಯ 85 ವಾರ್ಡುಗಳಲ್ಲಿ ಕಾಂಗ್ರೆಸ್ 64 ವಾರ್ಡುಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಬಿಜೆಪಿ ಹಾಗೂ ಅಕಾಲಿದಳವು ತಲಾ 7 ಸ್ಥಾನಗಳಲ್ಲಿ ಜಯ ಸಾಧಿಸಿವೆ. ಉಳಿದ 8 ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿವೆ. ಆಮ್ ಆದ್ಮಿ ಪಕ್ಷವು ಎಲ್ಲಾ ಮೂರು ಮಹಾನಗರ ಪಾಲಿಕೆಗಳಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group