ರಾಜ್ಯ ಸುದ್ದಿ

ಬಿಜೆಪಿ ಕೆಲ ನಾಯಕರು ಕಾಂಗ್ರೆಸ್‌ಗೆ ಬರಲು ಸಿದ್ಧರಿದ್ದಾರೆ: ಸಿದ್ದರಾಮಯ್ಯ

ವರದಿಗಾರ (ಡಿ.19): ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್‌ಗೆ ಬರಲು ಸಿದ್ಧರಿದ್ದು, ಈ ಬಗ್ಗೆ ಸಂಪರ್ಕದಲ್ಲೂ ಇದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ರಾಜ್ಯ ಬಿಜೆಪಿಗೆ ನಡುಕ ಹುಟ್ಟಿಸಿದ್ದಾರೆ.

ಅವರು ಬಾಗಲಕೋಟೆಯ ಜಮಖಂಡಿಯಲ್ಲಿ ಹೆಲಿಪ್ಯಾಡ್‌ನಲ್ಲಿ ಮಂಗಳವಾರ  ಪತ್ರಕರ್ತರೊಂದಿಗೆ ಮಾತನಾಡುತ್ತಾ, ಈ ಬಗ್ಗೆ ತಿಳಿಸಿದ್ದಾರೆ.

ಗುಜರಾತ್‌ನಲ್ಲಿ 44 ಸ್ಥಾನ ಹೊಂದಿದ್ದ ಕಾಂಗ್ರೆಸ್ ಇದೀಗ 80 ಸ್ಥಾನಕ್ಕೆ ಹೆಚ್ಚಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಅಲೆ ಕುಗ್ಗುತ್ತಿದೆ ಎನ್ನುವದಕ್ಕೆ ಈ ಚುನಾವಣೆಯೇ ಸಾಕ್ಷಿ. ಗುಜಾರಾತ್‌ನಲ್ಲಿ ನಿಜವಾಗಿ ಕಾಂಗ್ರೆಸ್ ಗೆದ್ದಿದೆ, ಬಿಜೆಪಿ ಸೋತಿದೆ. ರಾಹುಲ್ ಗಾಂಧಿ ನಾಯಕತ್ವಕ್ಕೆ ಸಿಕ್ಕ ಬೆಂಬಲ ಇದಾಗಿದೆ ಎಂದಿದ್ದಾರೆ.

ಮಹಾದಾಯಿ ವಿವಾದವನ್ನು ಪ್ರಧಾನಿ ಮೋದಿ ಇತ್ಯರ್ಥ ಮಾಡಲಿದ್ದಾರೆ ಎಂದು ಬಿ.ಎಸ್‌. ಯಡಿಯೂರಪ್ಪ ಹೇಳುತ್ತಿದ್ದಾರೆ. ವಿವಾದ ಇತ್ಯರ್ಥ ಮಾಡಲು ಹೊರಟಿರುವುದು ಸಂತಸ. ಹಿಂದೇನೇ ಈ ಬಗ್ಗೆ ಪತ್ರ ಬರೆದಿದ್ದೇನೆ. ನಿಯೋಗ ತೆಗೆದುಕೊಂಡು ಹೋಗಿದ್ದೆ, ಅಂದು ಆಗಲ್ಲ ಅಂದಿದ್ದರು. ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಈ ರೀತಿ ಮಹಾದಾಯಿ ವಿವಾದ ಬಗೆ ಹರಿಸಲು ಮುಂದಾಗಿದ್ದಾರೆ.  ‘ಅದೇನೇ ಇರಲಿ ಜನರಿಗೆ ಒಳ್ಳೆದಾದರೆ ಸಾಕು’ ಎಂದು ಅಭಿವೃದ್ಧಿ ವಿಷಯವನ್ನು ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group