ರಾಜ್ಯ ಸುದ್ದಿ

ಕರ್ನಾಟಕದ ಅರ್ಧಪಾಲೂ ಹೊಂದಿರದ ಗುಜರಾತ್‌ ದೇಶಕ್ಕೆ ಮಾದರಿಯಾ? -ಸಿದ್ದರಾಮಯ್ಯ ಪ್ರಶ್ನೆ

ವರದಿಗಾರ (ಡಿ.20): ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕದ ಅರ್ಧಪಾಲೂ ಹೊಂದಿರದ ಗುಜರಾತ್‌ ದೇಶಕ್ಕೆ ಅಭಿವೃದ್ಧಿ ಮಾದರಿ ಹೇಗಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಮಖಂಡಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಾಧನಾ ಸಂಭ್ರಮ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಂಡವಾಳ ಹೂಡಿಕೆಯಲ್ಲಿ ಇಡೀ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿರುವ ಕರ್ನಾಟಕ, ಇನ್ನು ಮುಂದೆ ಅಭಿವೃದ್ಧಿ ವಿಚಾರದಲ್ಲಿ ಇಡೀ ದೇಶಕ್ಕೆ ಮಾದರಿಯಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಭ್ರಮನಿರಸಗೊಂಡಿದ್ದಾರೆ. ಹಾಗಾಗಿಯೇ ಬಾಯಿಗೆ ಬಂದಂತೆ ಏಕವಚನದಲ್ಲಿ ನನಗೆ ಬೈಯುತ್ತಿದ್ದಾರೆ. ಅಯೋಗ್ಯ ಮುಖ್ಯಮಂತ್ರಿ ಎಂದು ಜರಿದಿದ್ದಾರೆ. ಹಿಂದೆ ಮುಖ್ಯಮಂತ್ರಿಯಾಗಿದ್ದವರು ಬಳಸುವ ಭಾಷೆಯೇ ಅದು? ನನಗೆ ಗೌರವ ಕೊಡದಿದ್ದರೂ ಮುಖ್ಯಮಂತ್ರಿಗೆ ಕುರ್ಚಿಗೆ ಗೌರವ ಕೊಡಲಿ ಎಂದು ಯಡಿಯೂರಪ್ಪರಿಗೆ ಸಲಹೆ ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group